LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಆಗಸ್ಟ್ 6 ಬದಲು ಆಗಸ್ಟ್ 13 ರಿಂದ ಮುಂಗಾರು ಅಧಿವೇಶನ : ಡಿ.ಕೆ.ಶಿವಕುಮಾರ್ 

Advertisement

ಬೆಂಗಳೂರು: ರಾಜ್ಯ ವಿಧಾನ ಮಂಡಲ ಮುಂಗಾರು ಅಧಿವೇಶನ ಆಗಸ್ಟ್ 13 ರಿಂದ ನಡೆಯಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಆಗಸ್ಟ್ 6 ರಿಂದ ಮುಂಗಾರು ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಅದಕ್ಕೂ ಮೊದಲೇ ಪೂರ್ಣ ಪ್ರಮಾಣದ ಸಂಪುಟ ರಚನೆಗೆ ಪ್ರಯತ್ನ ನಡೆಸಿದ್ದರೂ ಅದು ಸಾಧ್ಯವಾಗಿಲ್ಲ.

ರಾಜ್ಯದಲ್ಲಿ ಚುನಾವಣಾ ಆಯೋಗದಿಂದ ಎಸ್‌ಐಆರ್ ಪ್ರಕ್ರಿಯೆ ನಡೆದಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದ ನಂತರ ಅಧಿವೇಶನ ನಡೆಸುವುದಾಗಿ ಸಿಎಂ ಹೇಳಿದ್ದರು.

ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವ ಬೆನ್ನಲ್ಲೇ ವಿಧಾನ ಮಂಡಲ ಅಧಿವೇಶನ ಕೂಡ ಮುಂದೂಡಿಕೆಯಾಗುತ್ತಿದೆ.

ಆಗಸ್ಟ್ 13 ರಿಂದ ವಿಧಾನ ಮಂಡಲ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು, ಗೊಂದಲಗಳಿಗೆ ತೆರೆ ಹೇಳಿದ್ದಾರೆ.

ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದ್ದು, ಸಂಪುಟ ವಿಸ್ತರಣೆ ಬಳಿಕ ಮುಂಗಾರು ಆ. 13ರಿಂದ ಅಧಿವೇಶನ ಆರಂಭವಾಗಲಿದೆ ಎಂದು ಹೇಳಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST