LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಿದೇಶಿ ಮಹಿಳೆ ಮೇಲೆ ರೇಪ್, ವಿದೇಶಿ ಪ್ರವಾಸಿಗನ ಕೊಲೆ ಕೇಸ್ : ಮೂವರಿಗೆ ಮರಣದಂಡನೆ ಶಿಕ್ಷೆ 

Advertisement
ಕೊಪ್ಪಳ: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ, ವಿದೇಶಿ ಪ್ರವಾಸಿಗ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಯ ಗಂಗಾವತಿ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ.

ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳು ದೋಷಿಗಳಾಗಿದ್ದು, ಮೂವರಿಗೆ ಮರಣದಂಡನೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.ಗಂಗಾವತಿ 1ನೇ ಜಿಲ್ಲಾ ಸತ್ರ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ.

ಅಪರಾಧಿಗಳಾದ ಮಲ್ಲೇಶ್, ಸಾಯಿ ಹಾಗೂ ಶರಣಪ್ಪಗೆ ಗಂಗಾವತಿ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ಹಾಗೂ ವಿದೇಶಿ ಪ್ರವಾಸಿಗನ ಹತ್ಯೆ ಪ್ರಕರಣ ನಡೆದಿತ್ತು.

ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು.

ಈ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಹಾಗೂ ಶರಣಪ್ಪ ಮೂವರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು.

ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು. ಇಂದು ಮೂವರು ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ