LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್ : ಡಿ. ಕೆ ಶಿವಕುಮಾರ್ 

Advertisement
ಬೆಂಗಳೂರು : ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ ಇರುತ್ತೇನೆ. ನನ್ನ ಜೀವ, ನನ್ನ ರಕ್ತ ಎಲ್ಲವೂ ಕಾಂಗ್ರೆಸ್. ನಾನೀಗ ಪಕ್ಷವನ್ನು ಮುನ್ನಡೆಸುತ್ತಿದ್ದೇನೆ. ಅದಕ್ಕೆ ಆಧಾರಸ್ತಂಭವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾ‌ನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ವಿಧಾನಸಭೆಯಲ್ಲಿ ಆರ್ ಎಸ್ ಎಸ್ ಗೀತೆ ಹಾಡಿದ್ದರ ಬಗ್ಗೆ ಪ್ರತಿಕ್ರಿಯಿಸಿ, ನಾನು ಪರೋಕ್ಷವಾಗಿ, ಪ್ರತ್ಯಕ್ಷವಾಗಿ ಯಾವುದೇ ರೀತಿಯಲ್ಲೂ ಅವರ ಜೊತೆ ಕೈ ಜೋಡಿಸುವ ಪ್ರಮೇಯವೇ ಇಲ್ಲ. ನಾನು ಅಪ್ಪಟ ಕಾಂಗ್ರೆಸ್ಸಿಗ. ಜನತಾದಳ, ಬಿಜೆಪಿ ಬಗ್ಗೆ ಸಂಶೋಧನೆ ಮಾಡುತ್ತಿರುತ್ತೇನೆ. ಅದೇ ರೀತಿ ಆರ್ ಎಸ್‌ ಎಸ್ ಬಗ್ಗೆಯೂ ತಿಳಿದುಕೊಂಡಿದ್ದೇನೆ ಎಂದರು.

ನಾನು ಪ್ರತಿಯೊಂದು ರಾಜಕೀಯ ಪಕ್ಷಗಳ ಬಗ್ಗೆಯೂ ನನ್ನದೇ ಆದ ಸಂಶೋಧನೆ ನಡೆಸಿದ್ದೇನೆ. ಆರ್ ಎಸ್‌ ಎಸ್ ರಾಜ್ಯದಲ್ಲಿ ಹೇಗೆ ತನ್ನ ಸಂಘಟನೆ ಕಟ್ಟಿತು ಎಂಬುದು ನನಗೆ ತಿಳಿದಿದೆ.

ಆರ್‌ ಎಸ್ ಎಸ್ ಪ್ರತಿ ತಾಲ್ಲೂಕು, ಜಿಲ್ಲೆ ಸೇರಿದಂತೆ ಎಲ್ಲಾ ಕಡೆ ಶಿಕ್ಷಣ ಸಂಸ್ಥೆಗಳನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುತ್ತಿದೆ. ಸಾಕಷ್ಟು ಹಣ ಹೂಡಿಕೆ ಮಾಡುತ್ತಿದೆ. ಮಕ್ಕಳನ್ನು ತಲುಪುವ ಕೆಲಸ ಮಾಡುತ್ತಿದೆ ಎಂದರು.

ರಾಜಕೀಯವಾಗಿ ನಾವು ಭಿನ್ನಾಭಿಪ್ರಾಯಗಳನ್ನು ಹೊಂದಿರಬಹುದು. ರಾಜಕೀಯ ವ್ಯಕ್ತಿಯಾದ ನಾನು ರಾಜಕೀಯ ಎದುರಾಳಿಗಳಲ್ಲಿ ಯಾರು ಸ್ನೇಹಿತರಿದ್ದಾರೆ, ಯಾರು ಶತ್ರುಗಳಿದ್ದಾರೆ ಎನ್ನುವುದನ್ನು ತಿಳಿಯಬೇಕಲ್ಲವೇ? ಆದ ಕಾರಣಕ್ಕೆ ಆರ್ ಎಸ್ ಎಸ್ ಇತಿಹಾಸ ತಿಳಿದುಕೊಂಡಿದ್ದೇನೆ ಎಂದರು.

ಕೆಲವೊಂದು ಸಂದರ್ಭದಲ್ಲಿ ಕೆಲವೊಂದು ಸಂಸ್ಥೆಗಳಲ್ಲಿ ಒಂದಷ್ಟು ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನೂ ನಾವು ಗಮನಿಸಬೇಕಲ್ಲವೇ? ನೇರವಾಗಿ, ದಿಟ್ಟವಾಗಿ ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿರುವ ಒಳ್ಳೆಯ ಗುಣಗಳನ್ನು ಗಮನಿಸಬೇಕು ಅದೇ ರೀತಿ ನಾವು ಮಾಡಿದ್ದೇವೆ ಎಂದು ಹೇಳಿದರು.

ನಿಮ್ಮಲ್ಲೂ (ಮಾಧ್ಯಮ) ಒಬ್ಬೊಬ್ಬರದು ಒಂದೊಂದು ಗುಣ. ಹಿಡಿಯಲು ಬಂದರೆ ಜಾರಿಕೊಳ್ಳುವ ಗುಣವಿದೆ. ಒಳ್ಳೆಯ ಗುಣವೂ ಇದೆ. ಅವನ್ನು ನಾವು ಗಮನಿಸಬೇಕಲ್ಲವೇ? ಎಂದು ಡಿಸಿಎಂ ಅವರು ಉದಾಹರಣೆ ಕೊಟ್ಟರು.

ಬಿಜೆಪಿಯವರು ಧರ್ಮಸ್ಥಳ ಯಾತ್ರೆ ಮಾಡುತ್ತಿರುವ ವಿಚಾರವಾಗಿ, ಬಿಜೆಪಿ ಒಂದು ಠುಸ್ ಗಿರಾಕಿ. ಅವರು ಮಾಡುತ್ತಿರುವುದು ರಾಜಕಾರಣ. ಹಿರಿಯ ಅಧಿಕಾರಿ ಮೊಹಾಂತಿ ಅವರ ನೇತೃತ್ವದಲ್ಲಿ ತನಿಖಾ ತಂಡವು ಅಚ್ಚುಕಟ್ಟಾಗಿ ತಮ್ಮ ಕೆಲಸ ನಿರ್ವಹಿಸುತ್ತಿದೆ ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ