LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಮೈಸೂರು-ಬೆಳಗಾವಿ ವಿಶೇಷ ರೈಲು

Advertisement
ಬೆಂಗಳೂರು: ಸಂಕ್ರಾಂತಿ ಹಬ್ಬ ಹಾಗೂ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಊರಿಗೆ ಹೋಗುವವರಿಗೆ ನೈಋತ್ಯ ರೈಲ್ವೆ ಇಲಾಖೆ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರು ಮತ್ತು ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ಈ ವಿಶೇಷ ಎಕ್ಸ್ ಪ್ರೆಸ್ ರೈಲುಗಳು ಮೂರು ಟ್ರಿಪ್‌ಗಳ ಸಂಚಾರ ನಡೆಸಲಿವೆ. ಜನವರಿ 13ರಿಂದ ರೈಲು ಸಂಚಾರ ಆರಂಭವಾಗಲಿದೆ. ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಮಯ ಹಾಗೂ ನಿಲುಗಡೆ ಮಾಹಿತಿ ಇಲ್ಲಿದೆ.

ಮೈಸೂರು-ಬೆಳಗಾವಿ ವಿಶೇಷ ರೈಲು (ಸಂಖ್ಯೆ 06285): ಜನವರಿ 13, 16 ಮತ್ತು 23ರಂದು ರಾತ್ರಿ 8:40ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಬೆಳಗ್ಗೆ 10:30ಕ್ಕೆ ಬೆಳಗಾವಿ ತಲುಪಲಿದೆ.

ಬೆಳಗಾವಿ-ಮೈಸೂರು ವಿಶೇಷ ರೈಲು (ಸಂಖ್ಯೆ 06286): ಜನವರಿ 15, 18 ಮತ್ತು 26ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗ್ಗೆ 6:15ಕ್ಕೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ, ಹರಿಹರ, ಎಸ್‌ಎಸ್‌ಎಸ್ ಹುಬ್ಬಳ್ಳಿ, ಧಾರವಾಡ, ಅಲ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ವಿಶೇಷ ರೈಲು ಒಟ್ಟು 23 ಬೋಗಿಗಳನ್ನು ಹೊಂದಿರಲಿದೆ. ಇದರಲ್ಲಿ ಎಸಿ 2-ಟೈರ್ ಕಮ್ ಎಸಿ 3-ಟೈರ್ (1), ಎಸಿ 3-ಟೈರ್ (3), ಸ್ಲೀಪರ್ ಕ್ಲಾಸ್ (13), ಸಾಮಾನ್ಯ ದ್ವಿತೀಯ ದರ್ಜೆ (4) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಇರಲಿವೆ. ಪ್ರಯಾಣಿಕರು ಈ ರೈಲಿನ ಅನುಕೂಲತೆ ಪಡೆಯಬೇಕೆಂದು ರೈಲ್ವೆ ಇಲಾಖೆ ಮನವಿ ಮಾಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್