LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಬಿಹಾರ ಚುನಾವಣೆ : 190ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎನ್ ಡಿಎ ಮುನ್ನಡೆ

Advertisement
ಪಾಟ್ನಾ : ಬಹುನಿರೀಕ್ಷಿತ ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈಗಾಗಲೇ ಮತ ಎಣಿಕೆ ಶುರವಾಗಿದೆ.

ಮೊದಲು ಅಂಚೆ ಮತಗಳ ಎಣಿಕೆ ನಡೆಯುತ್ತಿದ್ದು, ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ 190 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಮಹಾಘಟಬಂಧನ್ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹೆಚ್ಚಿನ ರಾಷ್ಟ್ರೀಯ ಸಂಸ್ಥೆಗಳು ಎನ್ಡಿಎಗೆ ಸ್ಪಷ್ಟ ಮುನ್ನಡೆ ನೀಡಿವೆ. ಹಲವಾರು ಸಮೀಕ್ಷೆಗಳು ಎನ್ಡಿಎ ಬಹುಮತದ ಗಡಿ ದಾಟಲಿದೆ ಎಂದು ತೋರಿಸಿವೆ. ಮಹಾ ಮೈತ್ರಿಕೂಟ (ಆರ್ಜೆಡಿ-ಕಾಂಗ್ರೆಸ್-ಎಡ) ಹಿಂದುಳಿದಿದೆ ಎಂದು ಅಂದಾಜಿಸಲಾಗಿದೆ.

ಬಿಹಾರದ ಪ್ರಾದೇಶಿಕ ಅಸಮಾನತೆಯಿಂದಾಗಿ, ಫಲಿತಾಂಶಗಳು ಬದಲಾಗಬಹುದು. ಪಶ್ಚಿಮ ಬಿಹಾರವನ್ನು ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗಿದೆ.

ಬಿಹಾರದಲ್ಲಿ ಶೇ. 67.13 ರಷ್ಟು ಮತದಾನ ಆಗಿದ್ದು, ನವೆಂಬರ್ 6 ರಂದು ನಡೆದ ಮೊದಲ ಹಂತದ ಮತದಾನದಲ್ಲಿ ಶೇಕಡಾ 65.08 ರಷ್ಟು ಮತದಾನವಾದರೆ, ನವೆಂಬರ್ 11 ರಂದು ನಡೆದ ಎರಡನೇ ಹಂತದಲ್ಲಿ ಶೇಕಡಾ 69.20 ರಷ್ಟು ಮತದಾನವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ