LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪೊಲೀಸ್ ಸಿಬ್ಬಂದಿಗೆ ಶೀಘ್ರದಲ್ಲೇ ನೂತನ ವಿಸಿಲ್ ಗಾರ್ಡ್: ಡಿಕೆ ಶಿವಕುಮಾರ್ ಘೋಷಣೆ 

Advertisement

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕೆಳ ಹಂತದ ಸಿಬ್ಬಂದಿಗಳ ಅನುಕೂಲಕ್ಕಾಗಿ ಬ್ರಿಟಿಷ್ ಕಾಲದ ಹಳೆಯ ಮೆಟಲ್ ವಿಸಿಲ್ ಚೈನ್ ಹಾಗೂ ಲೋಹದ ಗುಂಡಿಗಳನ್ನು ಬದಲಾಯಿಸಿ, ಶೀಘ್ರದಲ್ಲೇ ನೂತನ ವಿಸಿಲ್ ಗಾರ್ಡ್ ಹಾಗೂ ಪಾಲಿಶ್ಡ್ ಮ್ಯಾಟ್ ಫಿನಿಶ್ ಬಟನ್‌ಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮುಖ ಘೋಷಣೆ ಮಾಡಿದ್ದಾರೆ. 

ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಬ್ಬಂದಿಗಳ ದೈನಂದಿನ ಕರ್ತವ್ಯ ನಿರ್ವಹಣೆಯನ್ನು ಸುಲಭಗೊಳಿಸಲು ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿಂದೆ ಬೇಸಿಗೆಯಲ್ಲಿ ಅಸ್ವಸ್ಥತೆ ಉಂಟುಮಾಡುತ್ತಿದ್ದ ಬ್ರಿಟಿಷ್ ಕಾಲದ ಸ್ಲೋಚ್ ಕ್ಯಾಪ್‌ಗಳನ್ನು ಬದಲಿಸಿ, ಇತರೆ ರಾಜ್ಯಗಳ ಮಾದರಿಯಂತೆ ನೇವಿ ಬ್ಲೂ ಬಣ್ಣದ ಪೀಕ್ ಕ್ಯಾಪ್‌ಗಳನ್ನು ಜಾರಿಗೆ ತರಲಾಗಿತ್ತು.

 ಈ ಐತಿಹಾಸಿಕ ಬದಲಾವಣೆಯ ಯಶಸ್ಸಿನ ಬೆನ್ನಲ್ಲೇ ಈಗ ಸಮವಸ್ತ್ರದ ವಿಸಿಲ್ ಚೈನ್ ಹಾಗೂ ಬಟನ್‌ಗಳ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ ಬಳಕೆಯಲ್ಲಿರುವ ಲೋಹದ ಚೈನ್ ಮತ್ತು ಗುಂಡಿಗಳು ಹವಾಮಾನ ವೈಪರೀತ್ಯದಿಂದಾಗಿ ಬೇಗನೆ ತುಕ್ಕು ಹಿಡಿಯುತ್ತಿದ್ದು, ಇದರಿಂದ ಸಮವಸ್ತ್ರ ಹಾಳಾಗುವುದಲ್ಲದೆ ಸಿಬ್ಬಂದಿಗೆ ಚರ್ಮದ ಸಮಸ್ಯೆ ಸೇರಿದಂತೆ ಅನೇಕ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದವು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ