LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಸೆರಗ ಸರ್ಸೆ ಅಶ್ಲೀಲತೆ ಹಾಡು : ನಿರ್ದೇಶಕ ಪ್ರೇಮ ವಿರುದ್ಧ ತಿರುಗಿ ಬಿದ್ದ ನೋರಾ ಫತೇಹಿ

Advertisement
ಕೆಡಿ ಹಾಡಿನ ವಿವಾದಕ್ಕೆ ನೋರಾ ಫತೇಹಿ (Nora Fatehi) ಸ್ಪಷ್ಟನೆ: ಸೋಷಿಯಲ್​ ಮೀಡಿಯಾ ಮೂಲಕ ಸ್ಪಷ್ಟನೆ ಕೊಟ್ಟ ನೋರಾ ಫತೇಹಿ 'ನಾನು ಈ ಹಾಡನ್ನು 3 ವರ್ಷಗಳ ಹಿಂದೆ ಕನ್ನಡ ಭಾಷೆಯಲ್ಲಿ ಚಿತ್ರೀಕರಿಸಿದ್ದು. ಸಂಜಯ್ ದತ್ ದೊಡ್ಡ ಕಲಾವಿದರು ಇರುವ ದೊಡ್ಡ ಸಿನಿಮಾ ಎಂಬ ಕಾರಣಕ್ಕೆ ನಾನು ಒಪ್ಪಿಕೊಂಡಿದ್ದೆ.

ಕನ್ನಡ ಭಾಷೆ ನನಗೆ ತಿಳಿಯುವುದಿಲ್ಲ. ಶೂಟಿಂಗ್ ಮಾಡುವಾಗ ಹಾಡಿನ ಅರ್ಥ ತಿಳಿಯಲು ನಾನು ಚಿತ್ರತಂಡದ ಮೇಲೆ ಅವಲಂಬಿತಳಾಗಿದ್ದೆ. ಭಾಷಾಂತರ ಮಾಡಿ ಹೇಳಿದಾಗ ನನಗೆ ಯಾವುದೂ ಅಸಭ್ಯ ಅಂತ ಅನಿಸಿರಲಿಲ್ಲ

ಆದರೆ ಈಗ ಹಿಂದಿಗೆ ಭಾಷಾಂತರ ಮಾಡಿರುವುದು ತುಂಬ ಆಕ್ಷೇಪಾರ್ಹವಾಗಿದೆ. ಅದರ ಬಗ್ಗೆ ನನಗೆ ಮಾಹಿತಿಯೇ ಇರಲಿಲ್ಲ. ನನ್ನ ಅನುಮತಿಯನ್ನು ಚಿತ್ರತಂಡದವರು ಪಡೆದುಕೊಂಡಿಲ್ಲ. ಹಾಡು ಬಿಡುಗಡೆಗೆ ನನ್ನನ್ನು ಕರೆದಾಗ ನನ್ನ ಫೋಟೋಗಳನ್ನು ಬಳಸಿದ ರೀತಿ ಕಂಡು ನನಗೆ ಬೇಸರ ಆಯಿತು.

ನನ್ನ ಮತ್ತು ಸಂಜಯ್ ದತ್ ಅವರ ಫೋಟೋಗಳನ್ನು ಎಐ ಮೂಲಕ ಸೃಷ್ಟಿಸಿ ಬಳಸಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲೇ ನನಗೆ ಕಿರಿಕಿರಿ ಆಯಿತು ಎಂದಿದ್ದಾರೆ ನೋರಾ ಫತೇಹಿ.

ಈಗಾಗಲೇ ಹೊತ್ತಿ ಉರಿಯುತ್ತಿರುವ ಈ ಹಾಡಿನ ವಿವಾದ ಇದೀಗ ಮತ್ತೊಂದು ಮಜಲು ಪಡೆದುಕೊಳ್ಳುವುದು ಖಾತ್ರಿ ಎಂಬಂತಾಗಿದೆ. ಮುಂದೆ ನಟಿ ನೋರಾ ಫತೇಹಿ ಹಾಗೂ ಸಿನಿಮಾ ಟೀಮ್ ನಡೆ ಏನು ಎಂಬುದನ್ನು ಕಾದು ನೋಡಬೇಕಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ