LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ಕಾರಿ ನೌಕರನ ವೈಯಕ್ತಿಕ ಮಾಹಿತಿಯನ್ನು RTI ಅಡಿ ಬಹಿರಂಗಪಡಿಸಲು ಸಾಧ್ಯವಿಲ್ಲ : ಹೈಕೋರ್ಟ್

Advertisement

ಬೆಂಗಳೂರು: ಸರ್ಕಾರಿ ನೌಕರ ಎನ್ನುವ ಕಾರಣಕ್ಕೆ ಅವರ ಪ್ರತಿ ವೈಯಕ್ತಿಕ ಮಾಹಿತಿಯನ್ನು ಆರ್.ಟಿ.ಐ. ಅಡಿ ಬಹಿರಂಗಪಡಿಸಲು ಸಾಧ್ಯವಿಲ್ಲ. ನೌಕರರಿಗೂ ವೈಯಕ್ತಿಕ ಗೌಪ್ಯತೆಯ ಹಕ್ಕು ಇರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಕೆಎಸ್‌ಆರ್ಟಿಸಿ ನಿವೃತ್ತ ನೌಕರರೊಬ್ಬರ ಆಸ್ತಿ ವಿವರ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಖಾಸಗಿ ವ್ಯಕ್ತಿಗಳ ನಡುವಿನ ಸಿವಿಲ್ ದಾವೆಗಳಿಗೆ ಸಾಕ್ಷ್ಯ ಸಂಗ್ರಹಿಸಲು ಆರ್‌.ಟಿ.ಐ.ಬಳಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲವೆಂದು ಹೇಳಿದೆ.

ಕೆಎಸ್‌ಆರ್ಟಿಸಿ ನಿವೃತ್ತ ನೌಕರರೊಬ್ಬರ ಆಸ್ತಿ ವಿವರ ಕೋರಿ ಬನಶಂಕರಿಯ ಸವಿತಮ್ಮ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿ ಈ ಆದೇಶ ನೀಡಿದೆ.

ಅರ್ಜಿದಾರರಿಗೆ ಮಾಹಿತಿ ನೀಡಲು ನಿರಾಕರಿಸಿ ರಾಜ್ಯ ಮಾಹಿತಿ ಆಯೋಗ ಮತ್ತು ಕೆಎಸ್‌ಆರ್ಟಿಸಿ ಹೊರಡಿಸಿದ ಆದೇಶಗಳನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.

ಖಾಸಗಿ ವ್ಯಕ್ತಿಗಳ ನಡುವಿನ ಸಿವಿಲ್ ದಾವೆಗೆ ಸಾಕ್ಷ್ಯ ಸಂಗ್ರಹಿಸಲು ಆರ್.ಟಿ.ಐ. ಕಾಯ್ದೆಯನ್ನು ಸಾಧನವಾಗಿ ಬಳಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ. ಅರ್ಜಿದಾರರು ಕೋರಿರುವ ಮಾಹಿತಿ ಸಾರ್ವಜನಿಕ ಹಿತಾಸಕ್ತಿಯ ವ್ಯಾಪ್ತಿಗೆ ಬರುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ