LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪೋಕ್ಸೋ ಕೇಸ್ : ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು 

Advertisement

ದಾವಣಗೆರೆ: ಬಾಲಕನ ಮೇಲಿನ ದೌರ್ಜನ್ಯ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೋ ಕೇಸ್ ಗೆ ಸಂಬಮ್ಧಿಸಿದಂತೆ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳಿಗೆ ದಾವಣಗೆರೆ ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​​ ಜಾಮೀನು ಮಂಜೂರು ಮಾಡಿದೆ.

ಕೆಲವು ಷರತ್ತು ವಿಧಿಸಿ‌ ನ್ಯಾ. ಶ್ರೀರಾಮ ನಾರಾಯಣ ಹೆಗಡೆ ವಚನಾನಂದ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ರದ್ದು ಮಾಡಿ ರೆಗ್ಯುಲರ್ ಬೇಲ್ ಪಡೆಯುವಂತೆ ಜೂ.25ರಂದು ಸ್ವಾಮೀಜಿಗೆ ಹೈಕೋರ್ಟ್ ಸೂಚಿಸಿತ್ತು.

 ಈ ಹಿನ್ನೆಲೆ ಜೂನ್​ 27ರಂದು ಜಿಲ್ಲಾ ವಿಶೇಷ ಪೋಕ್ಸೋ ಕೋರ್ಟ್​ಗೆ ವಚನಾನಂದ ಶ್ರೀ ಅರ್ಜಿ ಸಲ್ಲಿಸಿದ್ದರು. ಎರಡು ಕಡೆಯವರ ವಾದವನ್ನು ಈಗಾಗಲೇ ಆಲಿಸಿದ್ದ ನ್ಯಾಯಾಲಯ ಸ್ವಾಮೀಜಿಗೆ ರೆಗ್ಯುಲರ್ ಬೇಲ್ ನೀಡಿದೆ.

ಈಗಾಗಲೇ ವಚನಾನಂದ ಶ್ರೀ ವಿರುದ್ಧ 7 ಮಕ್ಕಳ‌ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದ್ದು, ಮಕ್ಕಳಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದ ಬಗ್ಗೆ ಹಾಗೂ ದೌರ್ಜನ್ಯ ನಡೆಸಿರುವ ಆರೋಪ ಸ್ವಾಮೀಜಿ ಮೇಲಿದೆ.

ಸಂತ್ರಸ್ತರ ಪರ ವಕೀಲ ರಮೇಶ್ ಕಲಾಲ್ ಮತ್ತು ವಚನಾನಂದಶ್ರೀ ಪರ ವಕೀಲ ಎಸ್.ವಿ.ಪಾಟೀಲ್ ವಾದ ಮಂಡನೆ ಮಾಡಿದ್ದರು. 

ಆ ಬಳಿಕ ವಚನಾನಂದಶ್ರೀಗೆ ಜಾಮೀನು ಸಂಬಂಧ ಅಂತಿಮ ತೀರ್ಪನ್ನು ಇಂದಿಗೆ ಕಾಯ್ದಿರಿಸಿರೋದಾಗಿ ಜುಲೈ 6ರಂದು ವಿಶೇಷ ಪೋಕ್ಸೋ ಕೋರ್ಟ್ ಹೇಳಿತ್ತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST