LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಉಪನ್ಯಾಸಕರ ಪುತ್ರನ ಅಪಹರಿಸಿ ಹತ್ಯೆ : ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು

Advertisement
ಬೆಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರು ಆರೋಪಿಗಳ ಮೇಲೆ ಫೈರಿಂಗ್ ಮಾಡಿ ಬಂಧಿಸಿದ್ದಾರೆ.

ಉಪನ್ಯಾಸಕ ಜೆ.ಸಿ.ಅಶ್ವತ್ಥ್ ಅವರ ಪುತ್ರ ನಿಶ್ಚಿತ್(13) ಹತ್ಯೆಯಾದ ಬಾಲಕ. ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7:30ಕ್ಕೆ ಆತನನ್ನು ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ.

ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ.

ಇನ್ನು ಆರೋಪಿಗಳನ್ನು ಬಂಧಿಸಲು ತೆರಳಿದ್ದ ವೇಳೆ ಮಾರಕಾಸ್ತ್ರದಿಂದ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ 6 ಸುತ್ತು ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ.

ಗುರುಮೂರ್ತಿ ಮತ್ತು ಗೋಪಾಲಕೃಷ್ಣ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ಸ್ಪೆಕ್ಟರ್ ಕುಮಾರಸ್ವಾಮಿ ಮತ್ತು ಪಿಎಸ್‌ಐ ಅರವಿಂದ ಕುಮಾರ್ ಫೈರಿಂಗ್ ಮಾಡಿದ್ದಾರೆ. ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ