ನವದೆಹಲಿ: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಡಿ.ಕೆ.ಶಿವಕುಮಾರ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ.ನವದೆಹಲಿಯ ಕರ್ತವ್ಯ ಭವನದಲ್ಲಿ ಸಿಎಂ ಡಿ.ಕೆ.ಶಿವಕುಮಾರ್, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ರಾಜ್ಯದ ಅಭಿವೃದ್ಧಿ ಯೋಜನೆಗಳ ಕುರಿತಾಗಿ ಚರ್ಚಿಸಿದರು. ರಾಜ್ಯದ ಅಭಿವೃದ್ಧಿಗೆ ಸಹಕಾರ ನೀಡುವಂತೆ ಕೋರಿದರು.
ಇದೇ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಡಿ.ಕೆ.ಶಿವಕುಮಾರ್ ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು.

