Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಳಮೀಸಲಾತಿಗಾಗಿ ರಾಯಚೂರು ನಗರ ಬಂದ್; ಸಂಪೂರ್ಣ ಸ್ಥಬ್ಧ

Advertisement
ರಾಯಚೂರು : ಪರಿಶಿಷ್ಟ ಜಾತಿಯ ಜನರಿಗೆ ಒಳ ಮೀಸಲು ನಿಗಧಿ ಮಾಡಿ ಸರ್ಕಾರಿ ಹುದ್ದೆಗಳನ್ನು ನೇಮಿಸುವಂತೆ ಒತ್ತಾಯಿಸಿ ಮಾದಿಗ ಸಂಬಂಧಿತ ಸಂಘಟನೆಗಳಿಂದ ಕರೆ ನೀಡಿದ ರಾಯಚೂರು ಬಂದ್ ಹೋರಾಟಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದೆ.

ರಾಜ್ಯ ಸರ್ಕಾರ 56,432 ಸರ್ಕಾರಿ ಹುದ್ದೆಗಳನ್ನು ನೇಮಿಸಲು ನಿರ್ಧರಿಸಿದೆ. ಆದರೆ ಪ್ರಕರಣವೊಂದರಲ್ಲಿ ಶೇ.50 ರಷ್ಟು ಮೀಸಲಾತಿ ಮೀರದಂತೆ ನೀಡಿರುವ ತೀರ್ಪಿನಂತೆ ಶೇ.50 ಮೀಸಲಾತಿಯಂತೆ ನೇಮಕಾತಿ ಮಾಡುವದಾಗಿ ಸರ್ಕಾರ ಹೇಳಿದೆ. ಆದರೆ ಮಾದಿಗ ಸಮೂದಾಯದ ನಿರುದ್ಯೋಗಿ ಯುವಕರಿಗೆ ಅನ್ಯಾಯವಾಗಲಿದ್ದು ಒಳಮೀಸಲು ನಿಗಧಿಪಡಿಸಿಯೇ ನೇಮಕಾತಿ ನಡೆಸಲು ಹೋರಾಟ ನಡೆಸಲಾಗುತ್ತದೆ.

ಎಸ್ಸಿಎಸ್ಟಿ ಸಮೂದಾಯಗಳಿಗೆ ಶೇ. ಮೀಸಲು ನಿಗಧಿಪಡಿಸಿದ ಒಳ ಮೀಸಲು ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದೆ. ನೇಮಕಾತಿಯಲ್ಲಿಯೇ ಒಳ ಮೀಸಲು ನಿಗಧಿಪಡಿಸಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಲಾಗುತ್ತಿದೆ.

ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಉದ್ದೇಶ ಪೂರಕವಾಗಿ ತಪ್ಪಿಸುವ ಉದ್ದೇಶದಿಂದ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ. ಶೇ.15 ಮೀಸಲಾತಿಯನ್ನು ಹಂಚಿಕೆ ಮಾಡಿ ನೇಮಕಾತಿ ಮಾಡಿಕೊಳ್ಳಬೇಕು. ಇಲ್ಲದೇ ಹೋದರೆ ಮಾದಿಗ ಸಮುದಾಯಕ್ಕೆ ಅನ್ಯಾಯವಾಗುತ್ತದೆ. ಅಲೆಮಾರಿಗಳಿಗೆ ಅನ್ಯಾಯ ಮಾಡಿರುವ ಸರ್ಕಾರ ಈಗ ಮಾದಿಗರೂ ಅನ್ಯಾಯಮಾಡಲು ಹೊರಟಿದೆ ಎಂದು ದೂರಿದರು.

ಹೋರಾಟದ ಭಾಗವಾಗಿ ಇಂದು ಕೇಂದ್ರ ಬಸ್ ನಿಲ್ದಾಣದಿಂದ ಯಾವುದೇ ಬಸ್ ಹೊರಡಲಿಲ್ಲ, ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಹೋರಾಟಗಾರರು ಟೆಂಟ್ ಹಾಕಿ ರಸ್ತೆ ತಡೆ ನಡೆಸಿದರು.

ಕಿರಾಣಿ ಬಜಾರ್, ಬಟ್ಟೆ ಬಜಾರ್, ಸರಾಫ್ ಬಜಾರ್, ಸ್ಟೇಷನ್ ರಸ್ತೆ ಸೇರಿದಂತೆ ನಗರದ ಎಲ್ಲಾ ವ್ಯಾಪಾರ ಮಳಿಗೆಗಳು ಬಂದ್ ಮಾಡಿತ್ತು, ರಂಜಾನ್ ಹಿನ್ನೆಲೆಯಲ್ಲಿ ಚಂದ್ರಮೌಳೇಶ್ವರ ರಸ್ತೆ, ಬಟ್ಟೆ ಬಜಾರ್ ನಲ್ಲಿ ವ್ಯಾಪಾರಿ ಮಳಿಗೆ ತೆರೆದರೂ ಬಳಿಕ ಹೋರಾಟಗಾರರ ಮನವಿ ಮೇರೆಗೆ ಬಂದ್ ಮಾಡಿ ಬೆಂಬಲ ಸೂಚಿಸಿದರು.

ನಗರದ ಯಾವುದೇ ರಸ್ತೆಯಲ್ಲಿ ಸಂಚಾರಕ್ಕೆ ಅವಕಾಶ ನೀಡದೇ ಸಂಪೂರ್ಣ ಸ್ಥಬ್ಧವಾಗಿತ್ತು. ಪೋಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ವರದಿ : ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು