LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರಾಯಣ್ಣ ಮೂರ್ತಿಗೆ ಕಪ್ಪು ಮಸಿ ಬಳಿದ ವಿವಾದ : ಲ್ಯಾಬ್ ವರದಿ ಬಹಿರಂಗ

Advertisement

ಬೆಳಗಾವಿ: ಇತ್ತ ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಹಿನ್ನೆಲೆಯಲ್ಲಿ ನಡೆದಿದ್ದ ಮೆರವಣಿಗೆ ವೇಳೆ ಕಲ್ಲು, ಚಪ್ಪಲಿ ತೂರಾಟದಿಂದ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಅತ್ತ ಬೆಳಗಾವಿ ಜಿಲ್ಲೆಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಪ್ಪು ಮಸಿ ಬಳಿದಿದ್ದ ವಿವಾದ ಆರಂಭವಾಗಿತ್ತು.


ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ಕಿಡಿಗೇಡಿಗಳು ಕಪ್ಪು ಮಸಿ ಎರಚಿದ್ದಾರೆ ಎಂದು ಹೇಳಲಾಗಿತ್ತು. ಸ್ಥಳದಲ್ಲಿ ಬಿಗುವ್ನ ವಾತಾವರಣ ನಿರ್ಮಾಣವಾಗಿತ್ತು.

ತಕ್ಷಣ ಎಚ್ಚೆತ್ತ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತ್ತು. ಪರಿಸ್ಥಿತಿಯನ್ನು ಶಾಂತಗೊಳಿಸಿತ್ತು.

ಇದೇ ವೇಳೆ ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ಬಿದ್ದಿರುವ ಮಸಿ ರೀತಿಯ ದ್ರವ ಹಾಗೂ ರಾಯಣ್ಣ ಮೂರ್ತಿ ಪಕ್ಕದಲ್ಲಿರುವ ಮರದ ಎಲೆ, ಮರದ ಅಂಟು ಪದಾರ್ಥವನ್ನು ಸಂಗ್ರಹಿಸಿ ಎಫ್ ಎಸ್ ಎಲ್ ಗೆ ರವಾನಿಸಲಾಗಿತ್ತು.

ಇದೀಗ ಲ್ಯಾಬ್ ವರದಿ ಬಹಿರಂಗವಾಗಿದೆ. ಸಂಗೊಳ್ಳಿ ರಾಯಣ್ಣ ಮೂರ್ತಿ ಮೇಲೆ ಬಿದ್ದಿರುವುದು ಕಪ್ಪು ಮಸಿಯಲ್ಲ, ಅದು ಮರದಿಂದ ಬಿದ್ದಿರುವ ಅಂಟು ದ್ರವ ಎಂದು ತಿಳಿದುಬಂದಿದೆ.

ರಾಯಣ್ಣ ಮೂರ್ತಿ ಮೇಲೆ ಬಿದ್ದಿರುವುದು ಮೂರ್ತಿಯ ಸಮೀಪದಲ್ಲೇ ಇರುವ ಮರದಿಂದ ಬಿದ್ದಿರುವ ಅಂಟಿನ ದ್ರವ ಎಂಬುದು ಎಫ್ ಎಸ್ ಎಲ್ ವರದಿಯಲ್ಲಿ ದೃಢವಾಗಿದೆ.

ಇದು ಯಾವುದೇ ಕಿಡಿಗೇಡಿಗಳು ನಡೆಸಿರುವ ಕೃತ್ಯವಲ್ಲ. ಆತಂಕಗೊಳ್ಳುವ ಅಗತ್ಯವಿಲ್ಲ ಎಂದು ಬೆಳಗಾವಿ ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಈ ಮೂಲಕ ಗ್ರಾಮದ ಜನರು ನಿಟ್ಟುಸಿರು ಬಿಟ್ಟಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ