LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಏನು ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ನೀಡಲಿ : ಆರ್. ಬಿ.ತಿಮ್ಮಾಪುರ್

Advertisement
ಬೆಂಗಳೂರು : ಸದನದಲ್ಲಿ ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ ನಾಯಕರಿಗೆ ಅಬಕಾರಿ ಸಚಿವ ಆರ್​.ಬಿ ತಿಮ್ಮಾಪುರ ತಿರುಗೇಟು ಕೊಟ್ಟಿದ್ದಾರೆ.

ಏನು ತಪ್ಪು ಮಾಡಿದ್ದೇನೆ ಅಂತ ರಾಜೀನಾಮೆ ನೀಡಲಿ. ಇವರು ಹೇಳಿದ ತಕ್ಷಣ ರಾಜೀನಾಮೆ ನೀಡಬೇಕಾ?ಅವರ ಹತ್ತಿರ ಏನು ಸಾಕ್ಷಿ ಇದೆ ಅಂತಾ ತಿಮ್ಮಾಪುರ ಪ್ರಶ್ನಿಸಿದ್ದಾರೆ.

ವಿಡಿಯೋದಲ್ಲಿ ಇರುವವನ ಇತಿಹಾಸ ಗೊತ್ತಾ ಇವರಿಗೆ? ಅಬಕಾರಿ ಡಿಸಿ ಸಸ್ಪೆಂಡ್ ಆಗಿದ್ದಾನೆ, ಜೈಲಿಗೆ ಹೋಗಿದ್ದಾನೆ. ಸಿಎಂ ಸೇರಿ ಯಾರೂ ಬೆನ್ನಿಗೆ ನಿಲ್ಲುವ ಅವಶ್ಯಕತೆ ಬರಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ತಿಮ್ಮಾಪುರ ಕಿಡಿಕಾರಿದ್ರು.

ಸದನದಲ್ಲಿ ಗದ್ದಲ ಗಲಾಟೆ ಹಾಗೂ ವಿರೋಧ ಪಕ್ಷಗಳ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ್ದ ಕಾರಣ ಸಿದ್ದರಾಮಯ್ಯ ಸದನಕ್ಕೆ ಸ್ವಲ್ಪ ತಡವಾಗಿಯೇ ಬಂದರು. ಅದಕ್ಕೂ ಮೊದಲು ಸಿದ್ದರಾಮಯ್ಯ ಅವರನ್ನು ಅವರ ಸರ್ಕಾರಿ ನಿವಾಸದಲ್ಲಿ ತಿಮ್ಮಾಪುರ ಅವರು ಪ್ರತ್ಯೇಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ತಿಮ್ಮಾಪುರ, 'ಬಿಜೆಪಿಯವರು ಹೇಳಿದ ಹಾಗೆ ರಾಜೀನಾಮೆ ಕೊಟ್ಟರೆ ಸರ್ಕಾರ ನಡೆಸಲು ಆಗುತ್ತಾ? ಏನು ಸಾಕ್ಷ್ಯ ಇದೆ ನನ್ನ ವಿರುದ್ಧ? ಇದೊಂದು ರಾಜಕೀಯ ಷಡ್ಯಂತ್ರ' ಎಂದರು.

'ಬಿಜೆಪಿಯವರು ತಪ್ಪು ಮಾಡುತ್ತಿದ್ದಾರೆ. ಒತ್ತಡದಿಂದ ಅವರು ಹೀಗೆ ಮಾಡುತ್ತಿದ್ದಂತೆ ಕಾಣಿಸುತ್ತಿದೆ. ನಾನು ಸದನದಲ್ಲಿ ಈಗಾಗಲೇ ಈ ಬಗ್ಗೆ ಮಾತನಾಡಿದ್ದೇನೆ. ಯಾವುದೋ ಅಧಿಕಾರಿ ಫೋನ್‌ನಲ್ಲಿ ಮಾತಾಡಿದರೆ ಅದಕ್ಕೆ ಮತ್ತು ನನಗೆ ಏನು ಸಂಬಂಧ? ಯಾರು ತಪ್ಪು ಮಾಡಿದ್ದಾರೊ ಅವರು ಅನುಭವಿಸ್ತಾರೆ' ಎಂದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ