LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ : 11 ಮಂದಿ ದಾರುಣ ಸಾವು 

Advertisement
ಬೆಂಗಳೂರು : 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಬೆಂಗಳೂರು ನಗರಕ್ಕೆ ಬಂದಿಳಿದಿದ್ದು, ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಈ ನಡುವೆ ಸಂಭ್ರಮಾಚರಣೆಗೆ ಬಂದಿದ್ದ 11 ಅಭಿಮಾನಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ಸಂಭ್ರಮಾಚರಣೆ ರದ್ದುಪಡಿಸಲಾಗಿದೆ.

ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದು, ಗೇಟ್ ನಂ.12 ರಲ್ಲಿ ಕಾಲ್ತುಳಿತ ಉಂಟಾಗಿದ್ದು, ಈ ವೇಳೆ ಕೆಲ ಅಭಿಮಾನಿಗಳು ಅಸ್ವಸ್ಥರಾಗಿದ್ದಾರೆ.

ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದು, 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಭಿಮಾನದ ಹೆಸರಲ್ಲಿ ಭಾರಿ ದುರಂತ ಸಂಭವಿಸಿದ್ದು, ಬೌರಿಂಗ್ ಆಸ್ಪತ್ರೆ ಮಾತ್ರವಲ್ಲ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೂ ಗಾಯಾಳುಗಳನ್ನು ದಾಖಲಿಸಲಾಗಿದೆ. ಸದ್ಯ 7 ಮಂದಿಗೆ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒಟ್ಟು ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST