LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ನಾಳೆ ಪಂಚ ರಾಜ್ಯಗಳ ಫಲಿತಾಂಶ : 823 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ 

Advertisement

​ನವದೆಹಲಿ :ದೇಶದ ರಾಜಕೀಯ ದಿಕ್ಸೂಚಿ ಎಂದೇ ಪರಿಗಣಿಸಲಾದ 5 ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಾಳೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದೆ. 

ಒಟ್ಟು 823 ಕ್ಷೇತ್ರಗಳ ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಾಳೆ ಮಧ್ಯಾಹ್ನದ ವೇಳೆಗೆ ಸ್ಪಷ್ಟವಾಗಲಿದ್ದು, ದೇಶದ ಜನರ ಕಣ್ಣು ಈ ಫಲಿತಾಂಶದ ಮೇಲಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲಿ ಈ ಬಾರಿ ಚುನಾವಣೆ ನಡೆದಿದೆ.ಒಟ್ಟು 823 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿದ್ದು, ಸಾವಿರಾರು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಮತ ಎಣಿಕೆ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಎಣಿಕೆ ನಡೆಯಲಿದೆ. ಚುನಾವಣಾ ಆಯೋಗವು ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.

​ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (TMC) ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.

​ತಮಿಳುನಾಡು: ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಮೈತ್ರಿಕೂಟಗಳ ನಡುವೆ ಭಾರಿ ಪೈಪೋಟಿ ಇದೆ.

​ಕೇರಳ: ಆಡಳಿತಾರೂಢ ಎಲ್‌ಡಿಎಫ್ (LDF) ಅಧಿಕಾರ ಉಳಿಸಿಕೊಳ್ಳುತ್ತಾ ಅಥವಾ ಯುಡಿಎಫ್ (UDF) ಕಮ್‌ಬ್ಯಾಕ್ ಮಾಡುತ್ತಾ ಎಂಬುದು ಕುತೂಹಲ ಮೂಡಿಸಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್