LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ : 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

Advertisement
ಹಾವೇರಿ : ಹಾವೇರಿಯಲ್ಲಿ ಇಂದು ಕಾಂಗ್ರೆಸ್ ಸರ್ಕಾರದಿಂದ ಸಾಧನಾ ಸಮಾವೇಶ ನಡೆಯಲಿದೆ. ಭೂ ಗ್ಯಾರಂಟಿ ಸಮರ್ಪಣ ಹೆಸರಿನಲ್ಲಿ ಸರ್ಕಾರದಿಂದ ಸಾಧನ ಸಮಾವೇಶ ಆಯೋಜನೆ ಮಾಡಿದ್ದು, ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ.ಅಲ್ಲದೇ ಈ ಸಮಾವೇಶದಲ್ಲಿ 1 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗುತ್ತದೆ.

ಸುಮಾರು 100 ಎಕರೆ ಪ್ರದೇಶದಲ್ಲಿ ಬೃಹತ್ ಸಮಾವೇಶದ ವೇದಿಕೆ ಈಗಾಗಲೇ ಸಿದ್ಧವಾಗಿದೆ. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ.

ಇಂದು ಹೆಲಿಕ್ಯಾಪ್ಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಹಾವೇರಿಗೆ ಆಗಮಿಸಲಿದ್ದಾರೆ ಹಾವೇರಿಯ ಮೆಡಿಕಲ್ ಕಾಲೇಜ್ ಆವರಣದಲ್ಲಿ ಸಿಎಂ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಆಗಲಿದೆ. ಹಂಪಿಯಿಂದ ನೇರವಾಗಿ ಹಾವೇರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ 10:40ಕ್ಕೆ ಪ್ರತ್ಯೇಕವಾಗಿ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಹ ಆಗಮಿಸಲಿದ್ದಾರೆ. ಬೆಂಗಳೂರಿನಿಂದ ನೇರವಾಗಿ ಹಾವೇರಿಗೆ ಆಗಮಿಸಲಿದ್ದಾರೆ.

ಸಾಧನಾ ಸಮಾವೇಶಕ್ಕಾಗಿ ಸುಮಾರು 2 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದ ವೀಕ್ಷಣೆಗೆ 21ಕ್ಕೂ ಹೆಚ್ಚು LED ಸ್ಕ್ರೀನ್ ಅಳವಡಿಸಲಾಗಿದೆ.ಹಾವೇರಿ ಜಿಲ್ಲಾಡಳಿತ 1.50 ಲಕ್ಷ ಜನರಿಗೆ ಊಟದ ವ್ಯವಸ್ಥೆ ಕಲ್ಪಿಸಿದೆ.

ಸಾಧನ ಸಮಾವೇಶಕ್ಕೆ ಸುಮಾರು 9 ಜಿಲ್ಲೆಗಳಿಂದ ಜನರು ಆಗಮಿಸಲಿದ್ದಾರೆ ಹಾವೇರಿ ಡಿಪೋ ದಿಂದ 180ಕ್ಕೂ ಹೆಚ್ಚು ಕೆಎಸ್‌ಆರ್ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ