LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಾಣಸಂದ್ರ ಪಿಎಸಿಬಿ ಅಧ್ಯಕ್ಷರಾಗಿ ಸಂತೋಷ್ ಕಂಟ್ಲಿ ಅವಿರೋಧ ಆಯ್ಕೆ

Advertisement

ತುರುವೇಕೆರೆ : ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಂತೋಷ್ ಕಂಟ್ಲಿ ಅವಿರೋಧವಾಗಿ ಆಯ್ಕೆಯಾದರು. 

ಹಿಂದಿನ ಅಧ್ಯಕ್ಷ ದೊರೈರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸಂತೋಷ್ ಕಂಟ್ಲಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಆದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್  ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಸಂತೋಷ್ ಕಂಟ್ಲಿ ಅವರು ಸಂಘದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ನೂತನ ಅಧ್ಯಕ್ಷರ ಆಯ್ಕೆ ಘೋಷಣೆಯಾಗುತ್ತಿದ್ದಂತೆ ಅಭಿಮಾನಿಗಳು, ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. 

ನೂತನ ಅಧ್ಯಕ್ಷ ಸಂತೋಷ್ ಕಂಟ್ಲಿ ಮಾತನಾಡಿ, ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಿರ್ದೇಶಕರ ಸಹಕಾರದೊಂದಿಗೆ ಸಂಘದ ಸದಸ್ಯರು, ರೈತರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ದೊರಕಿಸಿಕೊಡಲು ಶ್ರಮಿಸುತ್ತೇನೆ ಎಂದರು. 

ನೂತನ ಅಧ್ಯಕ್ಷ ಸಂತೋಷ್‌ ಕಂಟ್ಲಿ ಅವರನ್ನು ಮಾಜಿ ಶಾಸಕರಾದ ಮಸಾಲಾ ಜಯರಾಮ್, ಎಂ. ಡಿ. ಲಕ್ಷ್ಮೀನಾರಾಯಣ್, ಉಪಾಧ್ಯಕ್ಷೆ ಸಾವಿತ್ರಿ, ನಿರ್ದೇಶಕರಾದ ದೊರೈರಾಜು, ಭೈರಪ್ಪಾಜಿ, ಪಾಂಡುರಂಗೇಗೌಡ, ಕೃಷ್ಣೇಗೌಡ, ಆನಂದ್ ಕುಮಾರ್, ಭಾರತಿ, ಗಂಗಾಧರಯ್ಯ, ನಿಜಗುಣ, ನಾಗರಾಜು, ಶಿವರಾಮಯ್ಯ, ಮೇಲ್ವಿಚಾರಕ ಭರತ್, ಬಿಜೆಪಿ ಅಧ್ಯಕ್ಷ ಪ್ರಕಾಶ್ ಯಾದವ್, ಖಜಾಂಚಿ ಪ್ರಸಾದ್ ಸೇರಿದಂತೆ ಹಲವರು ಅಭಿನಂದಿಸಿದರು.

ವರದಿ : ಗಿರೀಶ್ ಕೆ ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ