LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನಾನು, ಸತೀಶ್ ಜಾರಕಿಹೊಳಿ ವಾರಕ್ಕೊಮ್ಮೆ ಚರ್ಚೆ ಮಾಡುತ್ತೇವೆ : ಡಿ. ಕೆ ಶಿವಕುಮಾರ್

Advertisement
ಬೆಂಗಳೂರು: ಮಹದೇವಪ್ಪ ಅವರು ಕೂಡ ನಮ್ಮ ಹೈಕಮಾಂಡ್ ಆಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ ಎಂಬ ವಿಚಾರ, ಮಾಹಿತಿ ಅವರಿಗೆ ತಿಳಿದಿರಬೇಕು. ಹೀಗಾಗಿ ಅವರು ದಲಿತ ಸಿಎಂ ವಿಚಾರ ಪ್ರಸ್ತಾಪ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾಅತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಹದೇವಪ್ಪ ಅವರ ಹೇಳಿಕೆ ನೋಡಿದೆ.

ಅದರ ಹೊರತಾಗಿ ಬೇರೆ ಯಾವುದೇ ಚರ್ಚೆ ಇಲ್ಲ. ಅವರಿಗೆ ಸಿಎಂ ಬದಲಾವಣೆ ಮಾಹಿತಿ ಇರಬಹುದು, ಆದರೆ ಆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

ನನಗೆ ಯಾವುದೇ ಕರೆ ಬಂದಿಲ್ಲ. ನಾನು ನಮ್ಮ ಇಲಾಖೆಗೆ ಸಂಬಂಧಿಸಿದ ಕೆಲಸಗಳ ಮೇಲೆ ದೆಹಲಿಗೆ ಹೋಗಬೇಕಾಗಿದೆ. ನಗರಾಭಿವೃದ್ಧಿ ಇಲಾಖೆ ಯೋಜನೆಗೆ ಸಂಬಂಧಿಸಿದಂತೆ 1 ಲಕ್ಷ ಕೋಟಿ ರೂ. ನೀಡಲಾಗುತ್ತಿದ್ದು, ದೊಡ್ಡ ನಗರಗಳಿಗೆ ನೀಡುವುದಿಲ್ಲ ಎನ್ನುತ್ತಿದ್ದಾರೆ.

ಈ ಬಗ್ಗೆ ನಮ್ಮ ನಗರಾಭಿವೃದ್ಧಿ ಸಚಿವರ ಬಳಿ ಚರ್ಚೆ ಮಾಡಿ, 2 ಹಾಗೂ 3ನೇ ಹಂತದ ನಗರಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಿದ್ಧಪಡಿಸಲು ಹೇಳುತ್ತೇನೆ ಎಂದು ತಿಳಿಸಿದರು.

ಸಚಿವರು, ಶಾಸಕರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ಸಚಿವರುಗಳನ್ನು ನಿಯಂತ್ರಣ ಮಾಡಬೇಕಿರುವುದು ಮುಖ್ಯಮಂತ್ರಿಗಳು. ಶಾಸಕರನ್ನು ಅವರೇ ನಿಯಂತ್ರಿಸಬೇಕು. ಪಕ್ಷದ ವಿಚಾರವಾಗಿ ದೆಹಲಿಗೆ ಮಾಹಿತಿ ನೀಡುವ ವಿಚಾರ ನಾನು ಮಾಡುತ್ತಿದ್ದೇನೆ ಎಂದು ತಿಳಿಸಿದರು.

ನಾನು, ಸತೀಶ್ ಜಾರಕಿಹೊಳಿ ಸಮಾನ ಮನಸ್ಕರು, ಪಕ್ಷದ ವಿಚಾರವಾಗಿ ವಾರಕ್ಕೊಮ್ಮೆ ಚರ್ಚೆ ಮಾಡುತ್ತೇವೆ. ಜಾರಕಿಹೊಳಿ ಅವರು ನಮ್ಮ ಹಿರಿಯ ನಾಯಕರು, ನನ್ನ ಜತೆ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.

ನಾವು ವಾರಕ್ಕೊಮ್ಮೆ ಮಾತನಾಡುತ್ತಿರುತ್ತೇವೆ. ನಾವು ಸಮಾನ ಮನಸ್ಕರು. ಅವರಿಗೂ ಪಕ್ಷದ ಬಗ್ಗೆ ಅಪಾರವಾದ ಚಿಂತನೆ ಇದೆ. ನಮ್ಮ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ನಾವೆಲ್ಲ ಯೋಜನೆ ತಯಾರು ಮಾಡುತ್ತಿದ್ದೇವೆ ಎಂದು ತಿಳಿಸಿದರು.

ನೂತನ ಶಾಸಕರು ಕನಿಷ್ಠ 5 ಮಂತ್ರಿ ಸ್ಥಾನವನ್ನು ಹೊಸಬರಿಗೆ ನೀಡಬೇಕು ಎಂದು ಹೈಕಮಾಂಡ್ ಗೆ ಬರೆದಿರುವ ಪತ್ರದ ಬಗ್ಗೆ ಪತ್ರಿಕೆಗಳಲ್ಲಿ ಓದಿದ್ದೇನೆ. ನನಗೆ ಅವರ ಪತ್ರ ತಲುಪಿಲ್ಲ. ಎಲ್ಲರಿಗೂ ಮಂತ್ರಿಯಾಗುವ ಆಸೆ ಇರುತ್ತದೆ.

ಮೋದಿ ಅವರು ಶಾಸಕರಾಗದೇ ಸಿಎಂ ಆಗಲಿಲ್ಲವೇ. ಅವರು ಕೇಳುವುದರಲ್ಲಿ ತಪ್ಪೇನಿಲ್ಲ. ಮೊದಲ ಬಾರಿಗೆ ಶಾಸಕರಾದಾಗ ಮಂತ್ರಿಯಾದವರಲ್ಲಿ ನಾನೂ ಒಬ್ಬ. ಹೊಸ ಪೀಳಿಗೆ ಬೆಳೆಯಬೇಕು.

ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ? ನಾನು ಸಚಿವನಾಗಿ 36 ವರ್ಷವಾಗಿದೆ. ಹೊಸ ಪೀಳಿಗೆ, ಹೊಸ ಆಲೋಚನೆಗಳು ಬರಬೇಕು.

ಹೊಸಬರು ಸಂಪುಟಕ್ಕೆ ಬರಬೇಕು ಎಂದು ಬೆಂಬಲಿಸುವವರಲ್ಲಿ ನಾನೂ ಇದ್ದೇನೆ. ಹೊಸಬರನ್ನು ನಾವು ತಯಾರು ಮಾಡಬೇಕಲ್ಲ. ಈ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ನಾನು ಮಂತ್ರಿಮಂಡಲ ಮಾಡುತ್ತೇನೆ ಎಂದು ಹೇಳಿಲ್ಲ. ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಅವರು ಸಂಚಿವ ಸಂಪುಟ ವಿಸ್ತರಣೆ ಮಾಡುವ ಕಾರಣಕ್ಕೆ ಕೆಲವರು ಪತ್ರ ಬರೆಯುತ್ತಾರೆ, ದೆಹಲಿಗೆ ಹೋಗುತ್ತಾರೆ, ಹೊರಗಡೆ ಹೋಗುತ್ತಾರೆ. ಅವರಿಗೂ ಆಸೆ ಇರುತ್ತದೆ ಎಂದು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ