LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರ ಆಯ್ಕೆ ಅನಿವಾರ್ಯ : ಸತೀಶ್ ಜಾರಕಿಹೊಳಿ 

Advertisement
ಬೆಳಗಾವಿ: ಕರ್ನಾಟಕ ಕಾಂಗ್ರೆಸ್ ನಲ್ಲಿ (KPCC) ಶೀಘ್ರದಲ್ಲೇ ಪ್ರಮುಖ ಬದಲಾವಣೆಗಳು ಸಂಭವಿಸುವ ಸಾಧ್ಯತೆಗಳಿವೆ ಎಂದು ಲೋಕೋಪಯೋಗಿ ಸಚಿವ (PWD Minister) ಸತೀಶ್ ಜಾರಕಿಹೊಳಿ (Satish jarakiholi) ಮಹತ್ವದ ಹೇಳಿಕೆ ನೀಡಿದ್ದಾರೆ. ಪಕ್ಷದ ಸಂಘಟನೆಯಲ್ಲಿ ಹೊಸ ನಾಯಕತ್ವ ಅಗತ್ಯವಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ತರುವುದು ಅನಿವಾರ್ಯವಾಗಿದೆ ಎಂದಿದ್ದಾರೆ.

ಈ ಮಧ್ಯೆ ಸಚಿವ ಸಂಪುಟದ ಪುನಾರಚನೆಯ ಕುರಿತಾಗಿಯೂ ಚರ್ಚೆಗಳು ನಡೆಯುತ್ತಿದ್ದು, ಹಿರಿಯ ನಾಯಕರು ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಲೋಕಸಭಾ ಚುನಾವಣೆಯ ನಂತರ ಆಡಳಿತದಲ್ಲಿ ಚುರುಕು ಮುಟ್ಟಿಸಲು ಈ ಬದಲಾವಣೆಗಳು ಪೂರಕವಾಗಲಿವೆ ಎಂದು ಅವರು ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬದಲಿಗೆ ಹೊಸಬರಿಗೆ ಅವಕಾಶ ನೀಡುವ ವಿಚಾರ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹೀಗಾಗಿ ಪಕ್ಷದ ಬಲವರ್ಧನೆಗಾಗಿ ಕೆಪಿಸಿಸಿ ಅಧ್ಯಕ್ಷ ಗಾದಿಗೆ ಹೊಸಬರ ಆಯ್ಕೆ ಅನಿವಾರ್ಯ ಎಂಬ ಜಾರಕಿಹೊಳಿ ಅವರ ಮಾತುಗಳು ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿವೆ.

'ಒಬ್ಬ ವ್ಯಕ್ತಿ ಒಂದೇ ಹುದ್ದೆ' ಎಂಬ ನಿಯಮದ ಆಧಾರದ ಮೇಲೆ ಸಂಘಟನೆಯಲ್ಲಿ ಮೇಜರ್ ಸರ್ಜರಿ ನಡೆಯುವುದು ಬಹುತೇಕ ಖಚಿತ ಎಂಬಂತೆ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST