LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ಇನ್ನಿಲ್ಲ 

Advertisement

ಬೆಂಗಳೂರು : ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ನಿಧನರಾಗಿದ್ದಾರೆ. ಕಳೆದ ಕೆಲಕಾಲದಿಂದ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಕಳೆದ 1 ತಿಂಗಳಿನಿಂದ ಅನಾರೋಗ್ಯಕ್ಕೆ ಹಾಗೂ ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ರಾಮಚಂದ್ರೇಗೌಡ ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

1953ರಲ್ಲಿ ಆರ್‌ಎಸ್‌ಎಸ್‌ ಸೇರುವ ಮೂಲಕ ಸಾರ್ವಜನಿಕ ಜೀವನ ಆರಂಭಿಸಿದ ಅವರು, 1970ರಲ್ಲಿ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶಿಸಿದರು.

ರಾಜ್ಯದಲ್ಲಿ ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ ಪ್ರಮುಖ ನಾಯಕರಲ್ಲಿ ಇವರೊಬ್ಬರು. ಅಂದಿನ ಭಾರತೀಯ ಜನಸಂಘದ ವತಿಯಿಂದ ಬೆಂಗಳೂರು ನಗರ ನಿಗಮಕ್ಕೆ (ಬಿಸಿಸಿ) ಆಯ್ಕೆಯಾದ ಮೊದಲ ಕಾರ್ಪೊರೇಟರ್ ಎಂಬ ಹೆಗ್ಗಳಿಕೆ ಇವರದ್ದು.

ಪ್ರಭಾವಿ ನಾಯಕ: ಇವರು ಸತತ ಐದು ಬಾರಿ ವಿಧಾನ ಪರಿಷತ್ (MLC) ಸದಸ್ಯರಾಗಿ ಆಯ್ಕೆಯಾಗಿ ದಾಖಲೆ ನಿರ್ಮಿಸಿದ್ದರು. ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST