LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆ : ಪಿಯುಸಿ ವಿದ್ಯಾರ್ಥಿನಿ ಗರ್ಭಿಣಿ

Advertisement

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ.


ಶಾಲೆಯಲ್ಲಿ ಓದುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆಯ ಹಿನ್ನೆಲೆ:

ಕಳೆದ ಫೆಬ್ರವರಿ 19 ರಂದು ವಿದ್ಯಾರ್ಥಿನಿಗೆ ಹಠಾತ್ ರಕ್ತಸ್ರಾವ ಉಂಟಾಗಿತ್ತು. ಆಕೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿದೆ.

ಘಟನೆ ಸಂಬಂಧ ದೂರು ದಾಖಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಳಿಸಿದ ಪೊಲೀಸರು, ವಿದ್ಯಾರ್ಥಿನಿಯನ್ನು ಪ್ರೀತಿಯ ಜಾಲದಲ್ಲಿ ಸಿಲುಕಿಸಿ ವಂಚಿಸಿದ ಆರೋಪಿಯನ್ನು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ.

ಸರ್ಕಾರದ ಸುಪರ್ದಿಯಲ್ಲಿರುವ, ಅತ್ಯಂತ ಕಟ್ಟುನಿಟ್ಟಾದ ಕಾವಲು ಇರಬೇಕಾದ ವಸತಿ ಶಾಲೆಯ ಆವರಣದಲ್ಲೇ ಇಂತಹ ಘಟನೆ ನಡೆದಿರುವುದು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ಘಟನೆಯ ಗಂಭೀರತೆ ಅರಿತು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ವಾರ್ಡನ್ ಹಾಗೂ ಶಾಲಾ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಸದ್ಯ ಸಂತ್ರಸ್ತ ವಿದ್ಯಾರ್ಥಿನಿಗೆ ವೈದ್ಯಕೀಯ ಮತ್ತು ಮಾನಸಿಕ ನೆರವು ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST