Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಬಸನಗೌಡ ಯತ್ನಾಳ ಕಾಂಗ್ರೆಸ್ ಪರ ಕೆಲಸ ಮಾಡಬೇಕು : ಸಿದ್ದರಾಮಯ್ಯ 

Advertisement
ಬಾಗಲಕೋಟೆ : ನನ್ನ ಪ್ರಕಾರ ಶಾಸಕ ಬಸನಗೌಡ ಯತ್ನಾಳ ಅವರು ಕಾಂಗ್ರೆಸ್ ಪರ ಕೆಲಸ ಮಾಡಬೇಕು. ಬಿಜೆಪಿಗೆ ಮಾಡಕೂಡದು. ಅವರು ಬಿಜೆಪಿಯಿಂದ ಉಚ್ಚಾಟನೆಯಾಗಿದ್ದಾರೆ. ಉಚ್ಚಾಟನೆ ಮಾಡಿದ ಪಾರ್ಟಿ ಪರ ಯಾಕೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಗೊತ್ತಿರುವ ಮಟ್ಟಿಗೆ ಶಾಸಕ ಬಸನಗೌಡ ಯತ್ನಾಳ ಬಿಜೆಪಿಗೆ ಮಾಡಲಿಕ್ಕಿಲ್ಲ. ಕಾಂಗ್ರೆಸ್ ಪರ ಪ್ರಚಾರಕ್ಕೆ ಯತ್ನಾಳಗೆ ಮನವಿ ಮಾಡ್ತೀರಾ ಎಂಬ ಪ್ರಶ್ನೆಗೆ ಇಲ್ಲವೆಂದು ಸನ್ನೆ ಮಾಡಿದರು.

ನಾರಾಯಣಸ್ವಾಮಿ ಅವರಿಗೆ ಕನಸು ಬಿದ್ದಿತ್ತಾ?: ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ ಎಂದು ಹೇಳಿರುವ ಚಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಖಾರವಾಗಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ನಾರಾಯಣಸ್ವಾಮಿ ಅವರಿಗೆ ಕನಸು ಬಿದ್ದಿತ್ತಾ? ಅವರು ನಮ್ಮ ಹೈಕಮಾಂಡ್ ಅಲ್ಲ. ನಾರಾಯಣಸ್ವಾಮಿ ಇರೋದು ಯಾವ ಪಾರ್ಟಿ? ಬಿಜೆಪಿಯಲ್ಲಿರೋ ನಾರಾಯಣಸ್ವಾಮಿ ಹೇಗೆ ಹೇಳ್ತಾರೆ? ಏನೋ ಹೇಳಬೇಕೋ ಹೇಳ್ತಾರೆ. ಅಂತ ಹೇಳಿಕೆಗೆ ನಾನು ರಿಯಾಕ್ಟ್ ಮಾಡಲ್ಲ ಎಂದರು.

ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್‌ನವರು ಕೆಲಸ ಮಾಡುತ್ತಿದ್ದಾರೆ ಎಂದಿರುವ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ಬಿಜೆಪಿಯವರೇ ನಮ್ಮ ಕಾಂಗ್ರೆಸ್ ಅಭ್ಯರ್ಥಿಗೆ ಸಹಾಯ ಮಾಡುತ್ತಿದ್ದಾರೆ. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ಜನ ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲ್ಲಿಸಲು ತೀರ್ಮಾನ ಮಾಡಿದ್ದಾರೆ ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು