LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | Politics News

ಸಿದ್ದರಾಮಯ್ಯರಿಗೆ ಅತ್ಯುನ್ನತ ಜವಾಬ್ದಾರಿ ನೀಡಿದ ಕಾಂಗ್ರೆಸ್ ಹೈಕಮಾಂಡ್ 

Advertisement

ನವದೆಹಲಿ : ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆಯಾಗಿದ್ದು, ಹಿರಿಯ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಅತ್ಯುನ್ನತ ಜವಾಬ್ದಾರಿಯೊಂದನ್ನು ನೀಡಿದೆ.

ಕಾಂಗ್ರೆಸ್ ಪಕ್ಷದ ಪರಮೋಚ್ಛ ನಿರ್ಧಾರ ಕೈಗೊಳ್ಳುವ ಅಂಗವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.

ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಜೂನ್ 2, 2026 ರಂದು ನವದೆಹಲಿಯ ಅಕ್ಬರ್ ರಸ್ತೆಯ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಈ ಕುರಿತು ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಗೌರವಾನ್ವಿತ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆದೇಶದ ಮೇರೆಗೆ ಈ ಪ್ರಮುಖ ನೇಮಕಾತಿ ನಡೆದಿದೆ.

ರಾಜ್ಯದಲ್ಲಿ ಸಚಿವ ಸಂಪುಟ ರಚನೆಯ ಕಸರತ್ತು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ಮಟ್ಟದ ಉನ್ನತ ಸಮಿತಿಯಲ್ಲಿ ಸ್ಥಾನ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

 

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ