Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

7280 ರೂ. ಬೆಂಬಲ ಬೆಲೆಯಲ್ಲಿ ಸೂರ್ಯ ಕಾಂತಿ ಖರೀದಿ : ಶಿವಾನಂದ ಪಾಟೀಲ 

Advertisement
ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಶೀಘ್ರವೇ ಖರೀದಿ ಕೇಂದ್ರಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಪ್ರತಿ ಕ್ವಿಂಟಲ್ ಗೆ 7280 ರೂ.ನಿಗದಿಪಡಿಸಲಾಗಿದೆ ಎಂದು ತಿಳಿಸಿದ್ದಾರೆ.


ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ, ರಾಯಚೂರು ಜಿಲ್ಲೆಗಳ ವ್ಯಾಪ್ತಿಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗುವುದು. ಪ್ರತಿ ಎಕರೆಗೆ 4 ಕ್ವಿಂಟಲ್ ನಂತೆ ಗರಿಷ್ಠ 20 ಕ್ವಿಂಟಲ್ ಸೂರ್ಯಕಾಂತಿ ಖರೀದಿಸಲಾಗುವುದು.


ಖರೀದಿ ಪ್ರಕ್ರಿಯೆ ಆದೇಶ ಹೊರಡಿಸಿದ ನಂತರ 90 ದಿನಗಳವರೆಗೆ ನಡೆಯಲಿದೆ. ರೈತರು ಸಮೀಪದ ಪ್ಯಾಕ್ಸ್, ಎಫ್.ಪಿ.ಒ. ಮತ್ತು TAPCMSಗಳಲ್ಲಿ ಸೂರ್ಯಕಾಂತಿ ಮಾರಾಟ ಮಾಡಬಹುದಾಗಿದೆ ಎಂದು ಹೇಳಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು