LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

ಸಿಲಿಂಡರ್ ಅಭಾವದ ನಡುವೆ ಕಳ್ಳಾಟ : 316 ಸಿಲಿಂಡರ್ ವಶಕ್ಕೆ

Advertisement
ಬೆಂಗಳೂರು: ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದ ಪರಿಣಾಮ ಭಾರತದಲ್ಲಿಯೂ ಕಂಡುಬರುತ್ತಿದ್ದು, ಗಲ್ಫ್ ರಾಷ್ಟ್ರಗಳಿಂದ ಬರುತ್ತಿದ್ದ ವಸ್ತುಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.ವಿಶೇಷವಾಗಿ ಕಚ್ಚಾ ತೈಲ ಆಮದು ಕಡಿಮೆಯಾಗಿರುವ ಹಿನ್ನೆಲೆ ಗ್ಯಾಸ್ ಸಿಲಿಂಡರ್ ಕೊರತೆ ಕಾಣಿಸಿಕೊಂಡಿದೆ.

ಕರ್ನಾಟಕದಲ್ಲೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸರಬರಾಜು ಕುಂಠಿತವಾಗಿರುವುದರಿಂದ ಹೋಟೆಲ್ ಹಾಗೂ ರೆಸ್ಟೋರೆಂಟ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕೆಲ ಕಡೆ ವಾಣಿಜ್ಯ ಉದ್ದೇಶಕ್ಕಾಗಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬಳಸುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಾರ್ಚ್ 14ರಂದು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿದ್ದು, ಒಟ್ಟು 316 ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದೆ.

ಗೃಹಬಳಕೆಯ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST