LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಶೀಘ್ರದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ : ಡಿ.ಕೆ. ಶಿವಕುಮಾರ್

Advertisement

ಬೆಂಗಳೂರು: ರಾಜ್ಯ ಸರ್ಕಾರವು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಶೀಘ್ರದಲ್ಲೇ 72 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. 

ಇದರ ಜೊತೆಗೆ, ರಾಜ್ಯದಲ್ಲಿ ರಾಷ್ಟ್ರಧ್ವಜದೊಂದಿಗೆ ಕನ್ನಡ ಧ್ವಜವನ್ನು ಹಾರಿಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಈ ಕುರಿತು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ವಿಸ್ತೃತವಾಗಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಬದುಕಿನ ನೈಜ ಪರಿಚಯ ಮಾಡಿಕೊಡುವ ಉದ್ದೇಶದಿಂದ 'ಗ್ರಾಮಾನುಭವ' ಎಂಬ ವಿನೂತನ ಯೋಜನೆಯನ್ನು ಸರ್ಕಾರ ಜಾರಿಗೆ ತರುತ್ತಿದೆ.

 ಈ ಯೋಜನೆಯಡಿ ಮೊದಲ ಹಂತದಲ್ಲಿ 20,500 ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಗದಲ್ಲಿ 2 ರಿಂದ 3 ದಿನಗಳ ಕಾಲ ಗ್ರಾಮ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಎರಡನೇ ಹಂತದಲ್ಲಿ ಸರ್ಕಾರಿ ಶಾಲೆಯ 2,500 ಮಂದಿ ವಿದ್ಯಾರ್ಥಿಗಳನ್ನು ಈ ಯೋಜನೆಗೆ ಒಳಪಡಿಸಲಾಗುವುದು.

ಈ ಯೋಜನೆಯು ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಗ್ರಾಮೀಣ ಜನರ ಜೀವನೋಪಾಯದ ಬಗ್ಗೆ ಯುವ ಪೀಳಿಗೆಗೆ ಅರಿವು ಮೂಡಿಸುವ ಗುರಿ ಹೊಂದಿದೆ.

ರೈತರು ಮತ್ತು ಶ್ರಮಿಕರ ದುಡಿಮೆಯ ಮೌಲ್ಯವನ್ನು ತಿಳಿಸಿಕೊಡುವುದರ ಜೊತೆಗೆ ಗ್ರಾಮೀಣ ಸಂಸ್ಕೃತಿ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

 ಇದಲ್ಲದೆ, ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕೋರ್ಸ್‌ಗಳು ಸೇರಿದಂತೆ ಎಲ್ಲಾ ವೃತ್ತಿಪರ ಹಾಗೂ ಉನ್ನತ ಶಿಕ್ಷಣದಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ