LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಳ್ಳಾರಿಯಲ್ಲಿ ಸಸ್ಪೆಂಡ್ ಆಗಿದ್ದ ಎಸ್ ಪಿ ಪವನ್ ಆತ್ಮಹತ್ಯೆಗೆ ಯತ್ನ 

Advertisement
ತುಮಕೂರು: ಬಳ್ಳಾರಿಯಲ್ಲಿ ನಡೆದಿದ್ದ ಫೈರಿಂಗ್ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಸಸ್ಪೆಂಡ್ ಆಗಿದ್ದ ಎಸ್ ಪಿ ಪವನ್ ನಜ್ಜೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಬಳ್ಳಾರಿ ಎಸ್ ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಒಂದೇ ದಿನದಲ್ಲಿ ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರವಾಗಿ ಗಲಾಟೆ ನಡೆದು ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದ.

ಈ ಘಟನೆ ಬೆನ್ನಲ್ಲೇ ಒಂದೇ ದಿನದಲ್ಲಿ ಎಸ್ ಪಿ ಪವನ್ ನಜ್ಜೂರ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿತ್ತು.

ಅಮಾನತು ಬೆನ್ನಲ್ಲೇ ತೀವ್ರವಾಗಿ ಮನನೊಂದಿದ್ದ ಪವನ್ ನಜ್ಜೂರ್, ತುಮಕೂರಿಗೆ ಹೋಗಿದ್ದರು. ಅಲ್ಲಿ ತನ್ನ ಸೇಹಿತನ ಫಾರ್ಮ್ ಹೌಸ್ ಗೆ ಹೋಗಿ ನಿದ್ರೆಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST