LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಐಗಳಿ ಪೊಲೀಸ್ ಠಾಣೆಗೆ ಎಸ್ಪಿ ಭೇಟಿ

Advertisement
ಐಗಳಿ: ಮೊಟ್ಟಮೋದಲ ಬಾರಿಗೆ ಅಥಣಿ ತಾಲೂಕಿಗೆ ಭೇಟಿ ನೀಡಿದ ನೂತನ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ.ಅವರು ರವಿವಾರ ರಂದು ಐಗಳಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು ಠಾಣೆಯ ಕಾರ್ಯವೈಖರಿ ಸಿಬ್ಬಂದಿಗಳ ಕರ್ತವ್ಯ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಬಗ್ಗೆ ಸಮಗ್ರವಾಗಿ ಪರಿಶೀಲನೆ ನಡೆಸಿದರು.

ಈ ವೇಳೆ ಠಾಣೆಯ ದಾಖಲೆಗಳನ್ನು ಪರಿಶೀಲಿಸಿದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ ಸಿಬ್ಬಂದಿಗಳು ಇನ್ನಷ್ಟು ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು ಸಾರ್ವಜನಿಕರೊಂದಿಗೆ ಸ್ನೇಹಪರವಾಗಿ ವರ್ತಿಸುವುದು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದನೆ ನೀಡುವುದು ಹಾಗೂ ಅಪರಾಧ ತಡೆಗಟ್ಟುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.



ಐಗಳಿ ಪೊಲೀಸ್‌ ಠಾಣೆಯ ಸಿಬ್ಬಂದಿಗಳ ಕಾರ್ಯನಿರ್ವಹಣೆಯನ್ನು ಮೆಚ್ಚಿದ ಅವರು, ಮುಂದಿನ ದಿನಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇನ್ನಷ್ಟು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಡಿವೈಎಸ್‌ಪಿ ಪ್ರಶಾಂತ ಮುನ್ನೊಳಿ ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಚಂದ್ರಶೇಖರ ಸಾಗನೂರ ಸೇರಿದಂತೆ ಪೊಲೀಸ್‌ ಉಪನಿರೀಕ್ಷಕರು ಹಾಗೂ ಠಾಣೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು

ವರದಿ :ಆಕಾಶ ಮಾದರ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST