LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಥಣಿ ಪುರಸಭೆಯಿಂದ ವಿಶೇಷ ಸ್ವಚ್ಛತಾ ಕಾರ್ಯಕ್ರಮ: ಸಕ್ರಿಯವಾಗಿ ಶ್ರಮಿಸಿದ ಪೌರಕಾರ್ಮಿಕರು.

Advertisement

ಅಥಣಿ : ಪಟ್ಟಣದ ಪ್ರಮುಖ ಜಲಮೂಲ ಹಾಗೂ ಆಯಕಟ್ಟಿನ ಸ್ಥಳವಾದ ವಾರ್ಡ್ ಸಂಖ್ಯೆ ೪ ಮತ್ತು ೧೩ ರ ವ್ಯಾಪ್ತಿಯ ಮುಧೋಳ ಬಾವಿ ಹತ್ತಿರ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸ್ವಚ್ಛತಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ದತ್ತಾ ವಾಸ್ಟರ್, ಸದಸ್ಯರಾದ ಮಲ್ಲು ಹುದ್ದಾರ್ ಹಾಗೂ ಆರೋಗ್ಯ ನಿರೀಕ್ಷಕರಾದ ರವೀಂದ್ರ ಸನಗೌಂಡ ಅವರ ನೇತೃತ್ವದಲ್ಲಿ ಈ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಪುರಸಭೆಯ ಸಮುದಾಯ ಸಂಚಾಲಕರು ಶಿವಲೀಲಾ ಕೊಳಲಗಿ,ರೇಖಾ ಬಳ್ಳೊಳ್ಳಿ, ಶೋಭಾ ಮಠಪತಿ, ಸೇಜಲ ರಜಪೂತ, ದೀಪಿಕಾ ಸಾಗರ  ಹಾಗೂ ಪುರಸಭೆ ಪೌರಕಾರ್ಮಿಕರು ಇವರು ಅತಿ ಉತ್ಸಾಹದಿಂದ ಭಾಗವಹಿಸಿ, ಸ್ವಚ್ಛತಾ ಕಾರ್ಯದಲ್ಲಿ ಸಕ್ರಿಯವಾಗಿ ಶ್ರಮಿಸುವ ಮೂಲಕ ಸಾರ್ವಜನಿಕರಲ್ಲಿ ಪರಿಸರ ಪ್ರಜ್ಞೆಯ ಜಾಗೃತಿ ಮೂಡಿಸಿದರು. ಮುಧೋಳ ಬಾವಿಯ ಆವರಣದಲ್ಲಿದ್ದ ಕಸದ ತೊಟ್ಟಿಯಿಂದಾಗಿ ಇಡೀ ಪ್ರದೇಶವು ಕಸದ ಮಯವಾಗಿ ಮಾರ್ಪಟ್ಟಿತ್ತು. ಇದರಿಂದ ಸಾರ್ವಜನಿಕರ ಆರೋಗ್ಯಕ್ಕೆ ತೀವ್ರ ಧಕ್ಕೆಯುಂಟಾಗುವ ಭೀತಿ ಎದುರಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತು, ಈ ಅಭಿಯಾನದ ಮೂಲಕ ಅಲ್ಲಿ ಜಮಾವಣೆಗೊಂಡಿದ್ದ ಕಸದ ರಾಶಿಯನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಇಡೀ ಪ್ರದೇಶವನ್ನು ಮಾದರಿಯಾಗಿ ಸ್ವಚ್ಛಗೊಳಿಸಲಾಯಿತು. 

ಕಸದಿಂದ ಹರಡಬಹುದಾದ ಸಾಂಕ್ರಾಮಿಕ ರೋಗ-ರುಜಿನಗಳನ್ನು ತಡೆಗಟ್ಟುವುದು, ಸ್ಥಳೀಯ ಪರಿಸರವನ್ನು ಸಂರಕ್ಷಿಸುವುದು ಮತ್ತು ಸಾರ್ವಜನಿಕರಿಗೆ ಮುಕ್ತ ಹಾಗೂ ಶುದ್ಧ ವಾತಾವರಣವನ್ನು ನಿರ್ಮಿಸಿಕೊಡುವುದು ಈ ಭಗೀರಥ ಪ್ರಯತ್ನದ ಮುಖ್ಯ ಉದ್ದೇಶವಾಗಿತ್ತು.ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲ ಪೌರಕಾರ್ಮಿಕರಿಗೂ ಮತ್ತು ಸಿಬ್ಬಂದಿ ವರ್ಗದವರಿಗೂ ಸ್ಥಾಯಿ ಸಮಿತಿ ಅಧ್ಯಕ್ಷರಾದ ದತ್ತಾ ವಾಸ್ಟರ್ ಅವರು ತುಂಬು ಹೃದಯದ ಧನ್ಯವಾದಗಳನ್ನು ಸಮರ್ಪಿಸಿದರು. ಇದೇ ವೇಳೆ ಮಾತನಾಡಿದ ಪುರಸಭೆ ಸದಸ್ಯ ಮಲ್ಲು ಹುದ್ದಾರ್ ಅವರು, ಪಟ್ಟಣವನ್ನು ಸುಂದರ ಹಾಗೂ ಸ್ವಚ್ಛವಾಗಿಟ್ಟುಕೊಳ್ಳುವುದು ಕೇವಲ ಆಡಳಿತ ಮಂಡಳಿಯ ಕೆಲಸವಲ್ಲ, ಅದು ನಮ್ಮೆಲ್ಲರ ಆದ್ಯ ಜವಾಬ್ದಾರಿಯಾಗಿದೆ ಎಂದು ನೆನಪಿಸಿದರು. ಆರೋಗ್ಯ ನಿರೀಕ್ಷಕರಾದ ರವೀಂದ್ರ ಸನಗೌಂಡ ಅವರು ಮಾತನಾಡಿ, ಪುರಸಭೆಯು ಪಟ್ಟಣದ ಸ್ವಚ್ಛತೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ; ಆದರೆ ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಹಾಕದೆ ಪುರಸಭೆಯೊಂದಿಗೆ ಕೈಜೋಡಿಸಿದರೆ ಮಾತ್ರ ಸಂಪೂರ್ಣ ಸ್ವಚ್ಛ ಅಥಣಿಯನ್ನು ನಿರ್ಮಿಸಲು ಸಾಧ್ಯ ಎಂದು ಮನವಿ ಮಾಡಿಕೊಂಡರು.

ವರದಿ : ಪ್ರಲ್ಹಾದ ವಾಘಮೋರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ