LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಜೂನ್ 12 ರಂದು ವಿಶೇಷ ಸಂಪುಟ ಸಭೆ

Advertisement
ಬೆಂಗಳೂರು: ಅನೇಕ ಬಾರಿ ಮುಂದೂಡಲ್ಪಟ್ಟಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ(ಜಾತಿಗಣತಿ) ಜಾರಿ ಕುರಿತಾಗಿ ಚರ್ಚಿಸಲು ಜೂನ್ 12 ರಂದು ವಿಶೇಷ ಸಂಪುಟ ಸಭೆ ಕರೆಯಲಾಗಿದೆ.

ಏಪ್ರಿಲ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾದ ಜಾತಿಗಣತಿ ವರದಿ ಬಗ್ಗೆ ನಂತರ ನಡೆದ ಸಚಿವ ಸಂಪುಟ ಸಭೆಗಳಲ್ಲಿ ಪ್ರಸ್ತಾಪಿಸಿದ್ದರೂ ಇದುವರೆಗೆ ಸೂಕ್ತ ತೀರ್ಮಾನ ಕೈಗೊಂಡಿಲ್ಲ.

ಮೇ 22 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಚರ್ಚೆಗೆ ಬಂದಿದ್ದು, ಕೆಲವು ಸಚಿವರು ಲಿಖಿತ ಅಭಿಪ್ರಾಯ ಸಲ್ಲಿಸಿಲ್ಲ. ಕೆಲವು ಸಚಿವರು ಒಂದೇ ಅಭಿಪ್ರಾಯ ಹೊಂದಿದ ಪತ್ರಕ್ಕೆ ಸಾಮೂಹಿಕವಾಗಿ ಸಹಿ ಹಾಕಿದ್ದಾರೆ ಎನ್ನುವ ಕಾರಣಕ್ಕೆ ವಿಷಯ ಮುಂದೂಡಲಾಗಿತ್ತು.

ಜೂನ್ 5 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವಿಚಾರ ಪಟ್ಟಿಯಲ್ಲಿದ್ದರೂ, ಚರ್ಚೆ ನಡೆಸದೇ ವಿಷಯವನ್ನು ಮುಂದೂಡಲಾಗಿತ್ತು.

ಜೂನ್ 12 ರಂದು ಜಾತಿ ಗಣತಿ ವಿಚಾರವಾಗಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಶೇಷ ಸಂಪುಟ ಸಭೆ ಕರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಇನ್ನು ಜೂನ್ 19ರಂದು ನಂದಿ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ನಂದಿ ಬೆಟ್ಟದ ಮಯೂರ ಸಭಾಂಗಣದಲ್ಲಿ ಜೂನ್ 19ರಂದು ಮಧ್ಯಾಹ್ನ 12 ಗಂಟೆಗೆ ಸಂಪುಟ ಸಭೆ ಕರೆಯಲಾಗಿದೆ. ಈ ಮೊದಲು ಕಲಬುರಗಿ ಹಾಗೂ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ ನಡೆಸಲಾಗಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ