LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

2,500 ಬರ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ : ಆದ್ರೆ ಕಂಡಿಷನ್ ಅಪ್ಲೈ

Advertisement

ಬೆಂಗಳೂರು: ಮಳೆ ಅಭಾವದಿಂದ ಸಂಕಷ್ಟಕ್ಕೊಳಗಾಗಿರುವ (Drought Relief) ರಾಜ್ಯದ ಅನ್ನದಾತರಿಗೆ ರಾಜ್ಯ ಸರ್ಕಾರ (Karnataka Govt) ಸಿಹಿ ಸುದ್ದಿ ನೀಡಿದ್ದು, ಪ್ರಥಮ ಕಂತಿನ ಬರ ಪರಿಹಾರವಾಗಿ ಬರಪೀಡಿತ ತಾಲೂಕುಗಳ ಪ್ರತಿಯೊಬ್ಬ ರೈತನಿಗೆ (Farmer) ತಲಾ ₹2,500 ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ

ಈ ಮೊತ್ತ ತೀರಾ ಕಡಿಮೆಯಾಗಿದ್ದು, ಪ್ರತಿ ಎಕರೆಗೆ ಕನಿಷ್ಠ 25,000 ರೂಪಾಯಿ ನೀಡಬೇಕೆಂದು ರೈತರು ಹಾಗೂ ವಿರೋಧ ಪಕ್ಷದ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವಿರೋಧ ಹಾಗೂ ಆಗ್ರಹಗಳ ನಡುವೆಯೂ ಸರ್ಕಾರ ಸದ್ಯ ನಿಗದಿತ ಮೊತ್ತವನ್ನೇ ಬಿಡುಗಡೆಗೊಳಿಸಿದೆ.

ಎಸ್‌ಡಿಆರ್‌ಎಫ್ ನಿಧಿಯಿಂದ ನೆರವು ಮಂಜೂರು

ರಾಜ್ಯದಲ್ಲಿರುವ ಒಟ್ಟು 240 ತಾಲೂಕುಗಳ ಪೈಕಿ 226 ತಾಲೂಕುಗಳನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶಗಳೆಂದು ಸರ್ಕಾರ ಘೋಷಿಸಿದೆ.

ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ಅನುದಾನ ತಲುಪುವುದಕ್ಕೆ ಕಾಯದೆ, ರಾಜ್ಯ ಸರ್ಕಾರವು ತನ್ನದೇ 'ರಾಜ್ಯ ಪ್ರಕೃತಿ ವಿಕೋಪ ಪರಿಹಾರ ನಿಧಿ'ಯಿಂದ ಪ್ರಥಮ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಈ ಮೂಲಕ ಸಂಕಷ್ಟದಲ್ಲಿರುವ ಕೃಷಿಕರಿಗೆ ತಕ್ಷಣದ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಪರಿಹಾರ ಪಡೆಯಲು ಪ್ರತ್ಯೇಕ ಅರ್ಜಿಯ ಅಗತ್ಯವಿಲ್ಲ

ಈ ಬರ ಪರಿಹಾರ ಮೊತ್ತವನ್ನು ಪಡೆಯಲು ರೈತರು ಯಾವುದೇ ಸರ್ಕಾರಿ ಕಚೇರಿಗೆ ಅಲೆಯುವ ಅಥವಾ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಸರ್ಕಾರದ ಇ-ಆಡಳಿತದ 'ಫ್ರೂಟ್ಸ್' ತಂತ್ರಾಂಶ ಹಾಗೂ ಮುಂಗಾರು ಬೆಳೆ ಸಮೀಕ್ಷೆಯ ದತ್ತಾಂಶಗಳನ್ನು ಆಧರಿಸಿ ಅರ್ಹ ಫಲಾನುಭವಿಗಳನ್ನು ನೇರವಾಗಿ ಆಯ್ಕೆ ಮಾಡಲಾಗುತ್ತದೆ. ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ನೇರ ಹಣ ವರ್ಗಾವಣೆ (DBT) ಮೂಲಕವೇ ಈ ಮೊತ್ತ ಜಮೆಯಾಗಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ