LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಮೆರವಣಿಗೆ ವೇಳೆ ಕಲ್ಲು ತೂರಾಟ : 8 ಜನ ಅರೆಸ್ಟ್ 

Advertisement
ಬಾಗಲಕೋಟೆ : ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಿಲಾ ಓಣಿ ಬಳಿ ಕಲ್ಲು ಹಾಗೂ ಚಪ್ಪಲಿ ತೂರಾಟ ಘಟನೆಯ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಪರಿಸ್ಥಿತಿ ಪ್ರಸ್ತುತ ನಿಯಂತ್ರಣದಲ್ಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲುಗಳು ಮತ್ತು ಒಂದು ಚಪ್ಪಲಿ ತೂರಲಾಗಿದೆ.

ಮಸೀದಿಯಲ್ಲಿ ಇದ್ದಂತಹ ತಂಜೀರ್ ಎಂಬತ ಕಲ್ಲು ತೂರಾಟ ಮಾಡಿದ್ದಾನೆ. ಪ್ಲಾನ್ ಮಾಡಿ ತೂರಾಟ ಮಾಡಿಲ್ಲ ಅಂತ ಅವನು ಹೇಳಿದ್ದಾನೆ.

ಆ ಕಲ್ಲು ನಮ್ಮ ಇಬ್ಬರು ಪಿಸಿಗಳಿಗೆ ಬಂದು ಬಿದ್ದಿದೆ ಗಲಾಟೆಯ ವೇಳೆ ನನಗೂ ಕಲ್ಲೇಟು ಬಿದ್ದಿದೆ. ಗಲಾಟೆಯಲ್ಲಿ ಎಂಟು ಆರೋಪಿಗಳನ್ನು ಅರೆಸ್ಟ್ ಮಾಡಿದ್ದೇವೆ ಮಸೀದಿಯಲ್ಲಿ ಪ್ರಾರ್ಥನೆ ಬಳಿಕ ಕೆಲವರು ಅಲ್ಲೇ ಉಳಿದಿದ್ದರು ಎಂದು ಎಸ್ಪಿ ಸಿದ್ದಾರ್ಥ ಗೋಯಲ್ ನೀಡಿದರು.

ಆದರೆ, ಸಾರ್ವಜನಿಕರಿಗೆ ಅಥವಾ ಶಿವಾಜಿ ಭಾವಚಿತ್ರಕ್ಕೆ ಯಾವುದೇ ಹಾನಿಯಾಗಿಲ್ಲ, ಬದಲಾಗಿ ಪೊಲೀಸರ ಮೇಲೆ ಕಲ್ಲು ಬಿದ್ದಿದೆ. ಘಟನೆ ಹಿಂದೆ ಯಾವುದೇ ಕೋಮು ಕಾರಣಗಳಿಲ್ಲ ಎಂದು ತಿಳಿಸಿದ್ದಾರೆ.

ಘಟನೆಯ ನಂತರ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆ. ಘಟನೆಗೆ ಸಂಬಂಧಿಸಿದ ವೀಡಿಯೊಗಳನ್ನು ಪರಿಶೀಲಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST