LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕೊಟ್ಟ ಸಾಲ ವಾಪಾಸ್ ಕೊಡದ ಕಾರಣ ಕಾಲೇಜು ಫೀಸ್ ಕಟ್ಟಲಾಗದೇ ವಿದ್ಯಾರ್ಥಿನಿ ಆತ್ಮಹತ್ಯೆ

Advertisement

ಕಾರವಾರ: ಪರಿಚಿತರೊಬ್ಬರಿಗೆ ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ.

ಕಾಲೇಜು ಶುಲ್ಕ ಕಟ್ಟಲು ತಂದೆ ನೀಡಿದ್ದ 10 ಸಾವಿರ ರೂಪಾಯಿ ಹಣವನ್ನು ಯುವತಿ ಪರಿಚಯಸ್ಥರಿಗೆ ಸಾಲವಾಗಿ ನೀಡಿದ್ದರು.

ಆ ಹಣ ಮರಳಿ ಸಿಗದ ಕಾರಣ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಭಟ್ಕಳದಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ ಗಾಯತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಾಲೇಜು ಶುಲ್ಕ ಪಾವತಿಸಲು ತಂದೆ ನಾಗರಾಜ ಲಚ್ಚಯ್ಯ ನಾಯ್ಕ ಮಗಳು ಗಾಯತ್ರಿಗೆ 10 ಸಾವಿರ ರೂಪಾಯಿ ನೀಡಿದ್ದರು.

ಇದೇ ವೇಳೆ ಊರಿನ ಪರಿಚಯಸ್ಥ ಸಂತೋಷ ಮಾಧೇವ ನಾಯ್ಕ ಎಂಬಾತ ನಿಗದಿತ ಸಮಯಕ್ಕೆ ಮರಳಿ ನೀಡುವುದಾಗಿ ಹೇಳಿ ಆಕೆಯಿಂದ 10 ಸಾವಿರ ರೂಪಾಯಿ ಸಾಲ ಪಡೆದಿದ್ದ.

ಸಾಲವಾಗಿ ಪಡೆದ ಹಣವನ್ನು ಆತ ನಿಗದಿತ ಸಮಯ ಕಳೆದರೂ ಮರಳಿ ನೀಡಿರಲಿಲ್ಲ. ಇದರಿಂದ ಗಾಯತ್ರಿಗೆ ಕಾಲೇಜು ಶುಲ್ಕ ಪಾವತಿಸಲು ಹಣವಿಲ್ಲದೇ ಪರದಡಿದ್ದಾಳೆ.

ಶುಲ್ಕ ಕಟ್ಟದ ಕಾರಣ ಪರೀಕ್ಷೆಯ ಹಾಲ್‌ಟಿಕೆಟ್ ಕೂಡ ದೊರೆತಿರಲಿಲ್ಲ. ಇದರಿಂದ ಮನನೊಂದ ಗಾಯತ್ರಿ ಗ್ರಾಮದ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಘಟನೆ ಸಂಬಂಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ