LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಬೆಳಗಾವಿಯಲ್ಲಿ ರಿಪಬ್ಲಿಕ್ ಸೇನಾ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

Advertisement

ಬೆಳಗಾವಿ: ಇಲ್ಲಿನ ಸರ್ಕಾರಿ ಸರ್ಕಿಟ್ ಹೌಸ್ ಆವರಣದಲ್ಲಿ ರಿಪಬ್ಲಿಕ್ ಸೇನೆ ಸಂಘಟನೆಯ ರಾಜ್ಯ ಸಮಿತಿ ಸಭೆ ಹಾಗೂ ನೂತನ ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅತ್ಯಂತ ಸಡಗರ ಮತ್ತು ದೃಢ ಸಂಕಲ್ಪದೊಂದಿಗೆ ಯಶಸ್ವಿಯಾಗಿ ನೆರವೇರಿತು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ರಕ್ಷಿಸುವ ಜನಪರ ಆಂದೋಲನವಾಗಿ ರಿಪಬ್ಲಿಕ್ ಸೇನೆ ಈ ಕಾರ್ಯಕ್ರಮದ ಮೂಲಕ ಮತ್ತಷ್ಟು ಬಲಗೊಂಡಿದೆ.

​ಕಾರ್ಯಕ್ರಮದಲ್ಲಿ ಸಂಘಟನೆಯ ಜವಾಬ್ದಾರಿಯನ್ನು ಹೊತ್ತ ಪ್ರಮುಖ ನಾಯಕರಾದ ರಾಜ್ಯ ಅಧ್ಯಕ್ಷರು ಶ್ರವಣ್ ಕುರನೆ, ರಾಜ್ಯ ಉಪಾಧ್ಯಕ್ಷರು ರಾಜಕುಮಾರ್ ಮೊರೆ, ರಾಜ್ಯ ಪ್ರಧಾನ ಕಾರ್ಯದರ್ಶಿ ಉತ್ತಮ ಕಾಂಬಳೆ, ರಾಜ್ಯ ಸಂಘಟನೆ ಸಂಚಾಲಕರು ರಮೇಶ್ ಹೂಗಾರ್, ರಾಜ್ಯ ಖಜಾಂಚಿ ಅಮೀನ್ ಮುಲ್ಲಾ, ರಾಜ್ಯ ಯುವ ಘಟಕ ಅಧ್ಯಕ್ಷರು ಸುಜಯ್ ಹಳ್ಳದಕೇರಿ ಹಾಗೂ ರಾಜ್ಯ ಸಮಿತಿ ಸದಸ್ಯರಾದ ಮಾದೇವ್ ಸರ್ ಕಾಂಬಳೆ, ಉಮೇಶ್ ರಾಥೋಡ್, ಲಕ್ಷ್ಮಣ್ ದೇವಪುರ್, ವೀರೇಶ್ ಮೇಟಿ ಹಾಗೂ ಹುಸೇನ್ ಬಡೆಗರ್ ಅವರು ಅಧಿಕಾರ ಸ್ವೀಕರಿಸಿದರು.
news_1784539571_0_359.webp

 

​ಸಮಾಜದಲ್ಲಿ ನಡೆಯುವ ಅನ್ಯಾಯ, ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿ ದೀನದಲಿತರಿಗೆ ಕಾನೂನಾತ್ಮಕ ಬೆಂಬಲ ನೀಡುವುದು, ಯುವ ಜನಾಂಗದಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವುದು ಹಾಗೂ ಸರ್ಕಾರದ ಜನಪರ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ನಿರಂತರ ನಿಗಾ ವಹಿಸುವುದು ಸಂಘಟನೆಯ ಮೂಲ ಉದ್ದೇಶವಾಗಿದೆ ಎಂದು ಈ ವೇಳೆ ತಿಳಿಸಲಾಯಿತು.
news_1784539582_0_723.webp

 

​ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಶ್ರವಣ್ ಕುರನೆ ಅವರು ನೂತನ ಜಿಲ್ಲಾ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ, ಸಂಘಟನೆಯನ್ನು ಹಳ್ಳಿ ಹಳ್ಳಿಗಳಿಗೂ ವಿಸ್ತರಿಸುವಂತೆ ಕರೆ ನೀಡಿದರು. ಜವಾಬ್ದಾರಿ ವಹಿಸಿಕೊಂಡ ನೂತನ ಪದಾಧಿಕಾರಿಗಳು ಮಾತನಾಡಿ, ಸಾರ್ವಜನಿಕರ समस्याಗಳಿಗೆ ಸ್ಪಂದಿಸಲು ಮತ್ತು ಜಿಲ್ಲೆಯಲ್ಲಿ ಶಾಂತಿ, ಸೌಹಾರ್ದತೆ ಹಾಗೂ ನ್ಯಾಯವನ್ನು ಎತ್ತಿಹಿಡಿಯಲು ನಮ್ಮ ಇಡೀ ತಂಡವು ಹಗಲಿರುಳು ಶ್ರಮಿಸಲಿದೆ ಎಂದು ದೃಢ ಸಂಕಲ್ಪ ಮಾಡಿದರು. ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರಮುಖ ಮುಖಂಡರು, ನೂರಾರು ಕಾರ್ಯಕರ್ತರು ಹಾಗೂ ಗಣ್ಯರು ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.        
news_1784539597_0_781.webp

 

                                                                          

 ವರದಿ :ಮಹಾಂತೇಶ್ ಎಸ್ ಹುಲಿಕಟ್ಟಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ