LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕಬ್ಬಿನ ದರ ನಿಗದಿ ಸಭೆಯಲ್ಲಿ-ಸೂಟ್‌ಕೇಸ್ ಗಿರಾಕಿ': ಬೆಳಗಾವಿಯಲ್ಲಿ ರೈತ ಬಣಗಳ ನಡುವೆ ಮಾರಾಮಾರಿ

Advertisement

ಬೆಳಗಾವಿ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಗಳ ನೇತೃತ್ವದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಆಲಿಸಲು ನಿಗದಿಯಾಗಿದ್ದ ಮಹತ್ವದ ಸಭೆಯು ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ತೀವ್ರ ರಾದ್ಧಾಂತಕ್ಕೆ ಸಾಕ್ಷಿಯಾಗಿದೆ.

ಸಿಎಂ ಸಭಾಂಗಣಕ್ಕೆ ಆಗಮಿಸುವ ಮುನ್ನವೇ ರೈತ ಸಂಘಟನೆಗಳ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಸಭಾಂಗಣವೇ ಅಕ್ಷರಶಃ ರಣಾಂಗಣವಾಗಿ ಮಾರ್ಪಟ್ಟ ಘಟನೆ ನಡೆದಿದೆ.

ಕೋಡಿಹಳ್ಳಿ ಚಂದ್ರಶೇಖರ್ ಬಣ ಹಾಗೂ ಚೂನಪ್ಪ ಪೂಜಾರಿ ಬಣದ ರೈತರ ನಡುವೆ ಮಾತಿನ ಚಕಮಕಿ ಆರಂಭವಾಗಿ, ಪರಸ್ಪರ ಮುಗಿಬಿದ್ದು ಹೊಡೆದಾಡಿಕೊಂಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿ ಮೇಜಿನ ಮೇಲಿದ್ದ ಕುಡಿಯುವ ನೀರಿನ ಗಾಜಿನ ಗ್ಲಾಸ್‌ಗಳನ್ನು ಎಸೆದು ಆಕ್ರೋಶ ಹೊರಹಾಕಲಾಗಿದೆ.

ನೀರು, ಚಹಾದಿಂದ ಶುರುವಾಗಿ 'ಸೂಟ್‌ಕೇಸ್‌'ವರೆಗೆ ಹೋದ ಗಲಾಟೆ!

ಸುವರ್ಣಸೌಧದ ಸಭಾಂಗಣದಲ್ಲಿ ಸಭೆ ಆರಂಭಕ್ಕೂ ಮುನ್ನ ರೈತರಿಗೆ ಕನಿಷ್ಠ ಕುಡಿಯಲು ನೀರು ಹಾಗೂ ಚಹಾ ವ್ಯವಸ್ಥೆ ಮಾಡಿಲ್ಲ ಎಂದು ಕೆಲ ರೈತರು ಆಕ್ರೋಶ ಹೊರಹಾಕಿದರು.

ಈ ವೇಳೆ ರೈತ ಮುಖಂಡ ಚೂನಪ್ಪ ಪೂಜಾರಿ ಎಲ್ಲರನ್ನೂ ಸಮಾಧಾನಪಡಿಸಲು ಮುಂದಾದರು. ಎಲ್ಲರನ್ನೂ ಸಮಾಧಾನಿಸಿ ಭಾಷಣ ಆರಂಭಿಸಿದ ಚೂನಪ್ಪ, 'ಈ ವರ್ಷ ಪ್ರತಿ ಟನ್ ಕಬ್ಬಿಗೆ ₹4,500 ಬೆಲೆ ಪಡೆದೇ ತೀರೋಣ' ಎಂದು ಹೇಳಿದರು.

ಚೂನಪ್ಪ ಅವರ ಈ ಹೇಳಿಕೆಗೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ರೈತರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. '

ಹೊರಗಡೆ ಮಾಧ್ಯಮಗಳ ಮುಂದೆ ಪ್ರತಿ ಟನ್‌ಗೆ ₹5,500 ದರ ಬೇಕು ಅಂತೀರಿ, ಒಳಗೆ ಬಂದು ₹4,500 ಸಾಕೇ? ನೀವೇನು ಸೂಟ್‌ಕೇಸ್ ಗಿರಾಕಿನಾ?' ಎಂದು ಕೋಡಿಹಳ್ಳಿ ಬಣದ ರೈತರೊಬ್ಬರು ನೇರವಾಗಿ ಪ್ರಶ್ನಿಸಿದರು.

'ಸೂಟ್‌ಕೇಸ್ ಗಿರಾಕಿ' ಎಂಬ ಮಾತು ಕೇಳಿ ಕೆರಳಿದ ಚೂನಪ್ಪ ಪೂಜಾರಿ ಬಣದ ಕಾರ್ಯಕರ್ತರು, ಆ ಮಾತು ಹೇಳಿದ ಕೋಡಿಹಳ್ಳಿ ಬಣದ ರೈತನ ಮೇಲೆ ಮುಗಿಬಿದ್ದರು. 

ಮಾತಿಗೆ ಮಾತು ಬೆಳೆದು ಪರಸ್ಪರ ಹಲ್ಲೆ ನಡೆಸಲಾಯಿತು. ರೊಚ್ಚಿಗೆದ್ದ ಕೆಲವರು ಮೇಜಿನ ಮೇಲಿಟ್ಟಿದ್ದ ಗಾಜಿನ ಲೋಟಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಸಭಾಂಗಣದಲ್ಲಿದ್ದ ಕುರ್ಚಿಗಳು ಚೆಲ್ಲಾಪಿಲ್ಲಿಯಾದವು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ