LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ದೆಹಲಿಯ ರೆಸ್ಟೋರೆಂಟ್'ನಲ್ಲಿ ಭೀಕರ ಅಗ್ನಿ ದುರಂತ : ಪ್ರಧಾನಮಂತ್ರಿ ಮೋದಿ ಸಂತಾಪ

Advertisement

ನವದೆಹಲಿ : ದೆಹಲಿಯ ಮಾಳವೀಯ ನಗರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಪ್ರಧಾನಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಪ್ರಧಾನಿ ಮೋದಿ ಅವರು ತಕ್ಷಣದ ಆರ್ಥಿಕ ನೆರವನ್ನು ಘೋಷಿಸಿದ್ದಾರೆ.

ದೆಹಲಿಯ ಮಾಳವೀಯ ನಗರ ಪ್ರದೇಶದ ರೆಸ್ಟೋರೆಂಟ್ ಒಂದರಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. 

ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿ ಕಟ್ಟಡದ 'ಲೆಮನ್ ಗ್ರೀನ್ ರೆಸ್ಟೋರೆಂಟ್'ನಲ್ಲಿ (Lemon Green Restaurant) ಈ ದುರಂತ ಸಂಭವಿಸಿದೆ. ಮೃತರ ಪೈಕಿ ಹಲವರು ವಿದೇಶಿ ಪ್ರಜೆಗಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಗ್ಗೆ ಸುಮಾರು 8.50ರ ಸುಮಾರಿಗೆ ಈ ಬೆಂಕಿ ಕಾಣಿಸಿಕೊಂಡಿದ್ದು, ಬೆಳಗ್ಗೆ 9.45ರ ಸುಮಾರಿಗೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಮಾಹಿತಿ ಲಭಿಸಿದೆ.

ತಕ್ಷಣವೇ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಘಟನೆಯು ನೆಹರು ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.

ಅಗ್ನಿಶಾಮಕ ದಳದ ಆರಂಭಿಕ ಮಾಹಿತಿಯ ಪ್ರಕಾರ, ರೆಸ್ಟೋರೆಂಟ್‌ನ ಬೇಸ್‌ಮೆಂಟ್‌ನಲ್ಲಿ ಸಿಲುಕಿಕೊಂಡಿದ್ದ 37 ಜನರನ್ನು ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ.

ಗಾಯಾಳುಗಳನ್ನು ಕ್ಯಾಟ್ಸ್ (CATS) ಆಂಬ್ಯುಲೆನ್ಸ್‌ಗಳ ಮೂಲಕ ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳದಲ್ಲಿ ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ