LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷನ ಮೇಲೆ ಯಲ್ಲಮ್ಮ ಗುಡ್ಡದಲ್ಲಿ ಹಲ್ಲೆ

Advertisement

ಬೆಳಗಾವಿ: ಧಾರವಾಡ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷನ ಮೇಲೆ ದೇವಸ್ಥಾನದಲ್ಲಿದ್ದಾಗಲೇ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಾಲಯದಲ್ಲಿ ನಡೆದಿದೆ.


ಅಣ್ಣಪ್ಪ ಮಾರಣಾಂತಿಕ ಹಲ್ಲೆಗೊಳಗಾದ ಜಿಲ್ಲಾಧ್ಯಕ್ಷ. ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆಂದು ಪತ್ನಿ ಹಾಗೂ ಮಗುವಿನೊಂದಿಗೆ ಅಣ್ಣಪ್ಪ ಬಂದಿದ್ದರು.

ಈ ವೇಳೆ ದೇವಸ್ಥಾನ ಒಳಗೆ ಅಣ್ಣಪ್ಪ ಪತ್ನಿ ಮಗುವಿಗೆ ತಿಂಡಿ ತಿನ್ನಿಸುತ್ತಿದ್ದರು. ದೇವಸ್ಥಾನದ ಒಳಗೆ ತಿಂಡಿ ತಿನ್ನಿಸದಂತೆ ಗೃಹರಕ್ಷಕ ದಳ ಸಿಬ್ಬಂದಿ ಸೂಚಿಸಿದ್ದಾರೆ. ಬಳಿಕ ದೇವಾಲಯದ ಹೊರಗೆ ಬಂದು ಪತಿ-ಪತ್ನಿ ಮಗುವಿಗೆ ತಿಂಡಿ ತಿನ್ನಿಸುತ್ತಿದ್ದರು.

ಈ ವೇಳೆ ಪೊಲೀಸ್ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅವಾಚ್ಯವಾಗಿ ನಿಂದಿಸಿದ್ದನ್ನು ಅಣ್ಣಪ್ಪ ಪ್ರಶ್ನೆ ಮಾಡಿದ್ದಾರೆ.

ಈ ವೇಳೆ ಪೊಲೀಸ್ ಸಿಬ್ಬಂದಿ ಹಾಗೂ ಅಣ್ಣಪ್ಪ ನಡುವೆ ಮಾತಿಗೆ ಮಾತು ಬೆಳೆದಿದೆ. ಕಾನ್ಸ್ ಟೇಬಲ್ ನಾಗನಗೌಡರ್ ಎಂಬುವವರು ಅಣ್ಣಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಣ್ಣಪ್ಪ ಅವರ ತಲೆಯಿಂದ ರಕ್ತ ಸೋರುವಂತೆ ಹಲ್ಲೆ ನಡೆಸಲಾಗಿದೆ.

ಗಂಭೀರವಾಗಿ ಗಾಯಗೊಂಡಿರುವ ಅಣ್ಣಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST