LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Local News

ಚಿಕನ್ ಬೇಕು ಎಂದ ಮಗನನ್ನ ಲಟ್ಟಣಿಗೆಯಿಂದ ಹೊಡೆದು ಕೊಂದ ತಾಯಿ 

Advertisement
ಮುಂಬೈ : ಚಿಕನ್ ಬೇಕು ಅಂತ ಹಠ ಹಿಡಿದ ಮಗನನ್ನೇ ತಾಯಿ ಲಟ್ಟಣಿಗೆಯಿಂದ ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಈ ಘಟನೆ ನಡೆದಿದೆ.

ಭಾನುವಾರ ಮಾಂಸಾಹಾರ ತಿನ್ನಲು ಒತ್ತಾಯಿಸಿದ್ದಕ್ಕೆ ತಾಯಿ ಏಳು ವರ್ಷದ ಮಗ ಹಾಗೂ ಮಗಳಿಗೆ ಲಟ್ಟಣಿಗೆಯಿಂದ ಹೊಡೆದಿದ್ದಾರೆ.ಪರಿಣಾಮ ಬಾಲಕ ಸಾವನ್ನಪ್ಪಿದ್ದು, ಆತನ ಸಹೋದರಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಮೃತ ಚಿನ್ಮಯ್ ಧುಮ್ಡೆ ಎಂಬ ಬಾಲಕ ತನ್ನ ತಾಯಿ ಪಲ್ಲವಿ ಧುಮ್ಡೆಗೆ ಕೋಳಿ ಖಾದ್ಯ ತಿನ್ನಬೇಕೆಂದು ಹೇಳಿದ್ದ. ಇದರಿಂದ ಕೋಪಗೊಂಡ ಆಕೆ ಆತನನ್ನು ಹೊಡೆದು ಕೊಂದಳು ಎನ್ನಲಾಗಿದೆ. ನಂತರ ಲಟ್ಟಣಿಗೆಯಿಂದ ಹೊಡೆದು 10 ವರ್ಷದ ಮಗಳಿಗೆ ಹೊಡೆದಿದ್ದಾಳೆ. ಆಕೆ ಪ್ರಸ್ತುತ ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಕಿರುಚಾಟ ಕೇಳಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದರು, ನಂತರ ಸ್ಥಳೀಯ ಪೊಲೀಸರು, ಸ್ಥಳೀಯ ಅಪರಾಧ ವಿಭಾಗ ಮತ್ತು ಉಪವಿಭಾಗಾಧಿಕಾರಿ ಸ್ಥಳಕ್ಕೆ ಧಾವಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಮಹಿಳೆಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾಲ್ಘರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪಾಲ್ಘರ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ದೇಶ್ಮುಖ್ ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ