LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕತ್ತಿಗೆ ಮುಖಭಂಗ : ಪ್ರತಿಷ್ಠಿತ ಡಿಸಿಸಿ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಭರ್ಜರಿ ಗೆಲುವು

Advertisement

ಬೆಳಗಾವಿ : ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಭರ್ಜರಿ ಗೆಲುವು ಸಾಧಿಸಿದ್ದು, ಬೆಳಗಾವಿಯಲ್ಲಿ ಮತ್ತೆ ಪಾರುಪತ್ಯ ಮೆರೆದಿದ್ದಾರೆ.


ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಜಾರಕಿಹೊಳಿ ಬಣದ ಒಂಬತ್ತು ಜನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

16 ನಿರ್ದೇಶಕ ಸ್ಥಾನಗಳ ಪೈಕಿ 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು.

2 ನಾಮಪತ್ರ ವಾಪಸ್ ಪಡಿಸುವಲ್ಲಿ ಬಾಲಚಂದ್ರ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಕಾಗವಾಡದಿಂದ ರಾಜುಕಾಗೆ, ಚಿಕ್ಕೋಡಿ ಇಂದ ಗಣೇಶ ಹುಕ್ಕೇರಿ, ಯರಗಟ್ಟಿ ತಾಲೂಕಿನಿಂದ ವಿಶ್ವಾಸ ವೈದ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ, ಬೆಳಗಾವಿ ತಾಲೂಕಿನಿಂದ ಸಚಿವ ಸತೀಶ್ ಪುತ್ರ ರಾಹುಲ್ ಜಾರಕಿಹೊಳಿ ಆಯ್ಕೆಯಾಗಿದ್ದು, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರುಪಾಕ್ಷ ಮಾಮನಿ, ಖಾನಾಪುರ ತಾಲೂಕಿನಿಂದ ಅರವಿಂದ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಾಮಾನ್ಯ ಕ್ಷೇತ್ರದಿಂದ ಚನ್ನರಾಜ ಹಟ್ಟಿಹೊಳಿ ವಿರೋಧವಾಗಿ ಆಯ್ಕೆಯಾಗಿದ್ದಾರೆ ಜಾರಕಿಹೊಳಿ ಬಣದ ವಿರುದ್ಧ ರಮೇಶ್ ಕತ್ತಿ ಹಾಗೂ ಸವದಿ ಚುನಾವಣಾ ಅಸ್ತ್ರ ಪ್ರಯೋಗಿಸಿದ್ದರು 9 ಸ್ಥಾನಗಳಲ್ಲಿ ಜಾರಕಿಹೊಳಿ ಬಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಕ್ಟೋಬರ್ 19 ರಂದು ರಾಮದುರ್ಗ, ಅಥಣಿ, ರಾಯಭಾಗ, ನಿಪ್ಪಾಣಿ, ಬೈಲಹೊಂಗಲ ಹಾಗು ಕಿತ್ತೂರು ತಾಲೂಕಿನಲ್ಲಿ ನಿರ್ದೇಶಕರ ಸ್ಥಾನಕ್ಕೆ ಮತದಾನ ನಡೆಯಲಿದೆ .
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ