LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

3ನೇ ಮಹಡಿಯಿಂದ ತಳ್ಳಿ ಮಗಳನ್ನೇ ಹತ್ಯೆಗೈದ ಮಲತಾಯಿ

Advertisement

ಬೀದರ್ : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, 3 ನೇ ಮಹಡಿಯಿಂದ ತಳ್ಳಿ ಮಗಳನ್ನೇ ಮಲತಾಯಿ ಹತ್ಯೆಗೈದ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.


ಮೃತ ಬಾಲಕಿಯನ್ನ 7 ವರ್ಷದ ಸಾನ್ವಿ ಎಂದು ಗುರುತಿಸಲಾಗಿದೆ. ರಾಧಾ ಎಂಬಾಕೆ ಈ ಕೃತ್ಯ ಎಸಗಿದ್ದಾಳೆ.ಆಟ ಆಡಿಸುವ ನೆಪದಲ್ಲಿ ಬಾಲಕಿಯನ್ನ 3 ನೇ ಮಹಡಿಗೆ ಕರೆದುಕೊಂಡು ಹೋದ ರಾಧ ಅಲ್ಲಿಂದ ತಳ್ಳಿ ಕೊಲೆ ಮಾಡಿದ್ದಾಳೆ. ನಂತರ ಆಟವಾಡುವಾಗ ಆಕಸ್ಮಾತ್ ಆಗಿ ಬಿದ್ದಿದ್ದಾಳೆ ಎಂದು ಬಿಂಬಿಸಿದ್ದಾಳೆ.

ಆ.28 ರಂದು ಬಾಲಕಿ ತಂದೆ ಆಕಸ್ಮಾತ್ ಸಾವು ಎಂದು ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮನೆಯ ಸಿಸಿಟಿವಿ ಪರಿಶೀಲಿಸಿದಾಗ ರಾಧಾ ಅನುಮಾನಾಸ್ಪವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

ಇದರಿಂದ ಪೊಲೀಸರಿಗೆ ರಾಧಾ ಮೇಲೆ ಇನ್ನಷ್ಟು ಅನುಮಾನ ಬಂದಿದೆ. ನಂತರ ಪೊಲೀಸರು ರಾಧಾಳನ್ನು ವಿಚಾರಣೆ ನಡೆಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಾನ್ವಿ ತಾಯಿ 6 ವರ್ಷದ ಹಿಂದೆ ಖಾಯಿಲೆಯಿಂದ ಮೃತಪಟ್ಟಿದ್ದರು, ನಂತರ ರಾಧಾಳನ್ನು ಬಾಲಕಿ ತಂದೆ ಮರು ಮದುವೆ ಆಗಿದ್ದರು. ಆದರೆ ಮಲತಾಯಿ ಮಗಳನ್ನೇ ಹತ್ಯೆಮಾಡಿ ಜೈಲು ಪಾಲಾಗಿದ್ದಾಳೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ