LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಹರಿಯಾಣ ಮಾಡೆಲ್ ನ ಕತ್ತು ಸೀಳಿ ಕೊಲೆ

Advertisement
ಸೋನಿಪತ್: ಕಳೆದ ಕೆಲ ತಿಂಗಳಿನಿಂದ ಮಾಡೆಲ್‌ಗಳು (Model) ಹಾಗೂ ಇನ್ಫ್ಯೂಯನ್ಸೆರ್‌ಗಳ (Influencer) ಸಾವಿನ (Death) ಸುದ್ದಿ ಹೆಚ್ಚಾಗಿ ಕೇಳಿಬರುತ್ತಿದೆ. ಅದರಲ್ಲೂ ಈ ತಿಂಗಳಲ್ಲಿ ಒಂದರ ನಂತರ ಒಂದು ಸಾವಿನ ಸುದ್ದಿಗಳು ಬರಸಿಡಿಲಿನಂತೆ ಅಪ್ಪಳಿಸುತ್ತಿದೆ.

ಇದೀಗ ಮಾಡೆಲ್‌ ಒಬ್ಬರನ್ನ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸೋನಿಪತ್‌ನ ಕಾಲುವೆಯೊಂದರೆ ಮಾಡೆಲ್‌ ಮೃತದೇಹ ಪತ್ತೆಯಾಗಿದೆ.

ಹರಿಯಾಣ (Haryana) ಮೂಲದ ಮಾಡೆಲ್‌ ಶೀತಲ್‌ ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಈ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕಿದೆ.
ನಾಪತ್ತೆಯಾಗಿದ್ದ ಶೀತಲ್

ಶೀತಲ್ ಕುಟುಂಬಸ್ಥರು ಹಾಗೂ ಪೊಲೀಸರ ಪ್ರಕಾರ ಶೀತಲ್ ಮೃತದೇಹ ಪತ್ತೆಯಾಗುವುದಕ್ಕೂ ಮೊದಲು ನಾಪತ್ತೆಯಾಗಿದ್ದರು, ಈ ಬಗ್ಗೆ ಶೀತಲ್ ಅವರು ಸಹೋದರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಶೀತಲ್ ಕೆಲಸಕ್ಕೆಂದು ಮನೆಯಿಂದ ಹೊರಹೋಗಿದ್ದು, ಮರಳಿ ಬಂದಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಜೂನ್ 15ರಂದು ಶೀತಲ್ ದೇಹ ಪತ್ತೆಯಾಗಿದ್ದು, ಅದೇ ಕಾಲುವೆಯಲ್ಲಿ ಅವರ ಪ್ರಿಯಕರನ ಕಾರು ಸಿಕ್ಕಿದ್ದು, ಕಾರಿನಲ್ಲಿದ್ದ ಪ್ರಿಯಕರನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನಿಖೆ ನಡೆಸಲಿರುವ ಪೊಲೀಸರು
ಈ ಪ್ರಕರಣದ ಬಗ್ಗೆ ಮಾತನಾಡಿದ ಸೋನಿಪತ್ ಎಸಿಪಿ ಪ್ರಧಾನ ಕಚೇರಿಯ ಅಜಿತ್ ಸಿಂಗ್, ಕಾಲುವೆಯಲ್ಲಿ ಯುವತಿಯ ಶವ ಇರುವ ಬಗ್ಗೆ ಮಾಹಿತಿ ಸಿಕ್ಕ ನಂತರ ಸ್ಥಳಕ್ಕೆ ತೆರಳಿರುವ ಪೊಲೀಸರು ಮೃತದೇಹವನ್ನ ವಶಪಡಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಆರಂಭಿಸಲಾಗಿದೆ. ಶೀತಲ್ ಮಾಡೆಲ್ ಆಗಿರುವ ಕಾರಣದಿಂದ ಎಲ್ಲಾ ಆಯಾಮದಲ್ಲಿ ತನಿಖೆ ಮಾಡಲಿದ್ದು, ಮುಂದಿನ ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ