LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಈ ಜಮೀನಗಳನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ : ಕೃಷ್ಣ ಬೈರೇಗೌಡ

Advertisement
ಬೆಂಗಳೂರು: ಜಂಗಲ್‌ ಅಥವಾ ಬಿ-ಖರಾಬು ಜಮೀನನ್ನು ಯಾರಿಗೂ ಮಂಜೂರು ಮಾಡಲು ಸಾಧ್ಯವಿಲ್ಲ. ಈ ಹಿಂದೆ ಇಂತಹ ಕೆಲವು ಪ್ರಕರಣಗಳು ಕಂಡು ಬಂದಿದ್ದು ಈ ಬಗ್ಗೆ ತನಿಖೆಯನ್ನೂ ನಡೆಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು " ಜಂಗಲ್‌ ಅಥವಾ ಬಿ-ಖರಾಬು ಜಮೀನು ಮಂಜೂರಾತಿ ವಿಚಾರದಲ್ಲಿ ಯಾವುದೋ ಕಾಲದಲ್ಲಿ ತಪ್ಪಾಗಿದೆ.

ಆಗಿನ ಸರ್ಕಾರ ಸರಿಯಾದ ಹೆಚ್ಚೆ ಇಟ್ಟಿಲ್ಲ.ಆದರೆ, ಅದನ್ನು ನಾವು ಸರಿ ಮಾಡುವ ಕೆಲಸಕ್ಕೆ ಮುಂದಾಗಿದ್ದೇವೆ. ಈಗಾಗಲೇ ಬೆಂಗಳೂರು ವಿಭಾಗ ಪ್ರದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ ಇದರ ನೈಜತೆ ಪರಿಶೀಲನೆಯ ಜವಾಬ್ದಾರಿ ಕೊಟ್ಟಿದ್ದೇವೆ. ತನಿಖೆ ಆರಂಭವಾಗಿದೆ. ಆದರೆ, ಪ್ರಗತಿ ಆಗಿಲ್ಲ. ತನಿಖೆಯನ್ನು ಶೀಘ್ರದಲ್ಲಿ ಮುಗಿಸಲು ಸೂಚಿಸಿದ್ದೇನೆ" ಎಂದು ತಿಳಿಸಿದರು.

ಏತನ್ಮಧ್ಯೆ ಇಂತಹ ಜಮೀನುಗಳು ಪೋಡ್ ಆಗುವುದು ಅಥವಾ ಭೂ ವ್ಯವಹಾರ ನಿಲ್ಲಿಸಬೇಕು ಎಂಬ ಕೂಗೂ ಕೇಳಿಬರುತ್ತಿದೆ. ಆದರೆ, ಈ ಬಗ್ಗೆ ಆಯುಕ್ತರು ಲಿಖಿತ ಸೂಚನೆ ನೀಡಿದ್ದಾರೆ.

ಈಗಾಗಲೇ ಮಂಜೂರಿದಾರರಿಗೆ ಆ ಜಮೀನು ಗ್ರ್ಯಾಂಟ್ ಆಗಿರುವುದರಿಂದ ಅವರ ಹಕ್ಕನ್ನು ಸರ್ಕಾರ ಮೊಟಕುಗೊಳಿಸಲು ಸಾಧ್ಯವಿಲ್ಲ ಎಂದು ಕಾನೂನಾತ್ಮಕ ಸೂಚನೆ ನೀಡಿದ್ದಾರೆ. ಅವರ ಪತ್ರ ಕಾನೂನಿಗೆ ಬದ್ದವಾಗಿದೆ.

ಈ ನಡುವೆ ಒಂದೇ ಕುಟುಂಬಕ್ಕೆ 119 ಏಕರೆ ಕೊಟ್ಟಿದ್ದಾರೆ. ಎರಡನೇಯದು ಹೀಗೆ ಮಂಜೂರಾದ ಜಮೀನು ಜಂಗಲ್ ಖರಾಬು. ಈ ಎರಡೂ ಪ್ರಶ್ನೆ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ. ಶೀಘ್ರ ವಿಚಾರಣೆ ಮುಗಿದರೆ ಇದರ ರದ್ದತಿ ಬಗ್ಗೆ ತೀರ್ಮಾನ ಮಾಡಬಹುದು.

ಹೀಗಾಗಿ ಶೀಘ್ರ ವಿಚಾರಣೆಗೆ ಸೂಚಿಸಲಾಗಿದೆ. ಅಲ್ಲದೆ, ವಿಚಾರಣೆ ಮುಗಿಯುವವರೆಗೆ ಏನು ಮಾಡಬಹುದು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಬಳಿಯೂ ಸಲಹೆ ಕೇಳಲಾಗಿದೆ" ಎಂದು ಮಾಹಿತಿ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ