LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಚನ್ನಮ್ಮನ ಕಿತ್ತೂರು: ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವು 

Advertisement
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಇಟಗಿ ಕ್ರಾಸ್ ರಸ್ತೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮಧ್ಯಾಹ್ನ ಟ್ಯಾಂಕರ್ ಡಿಕ್ಕಿ ಹೊಡೆದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇವರೆಲ್ಲರೂ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿತ್ತೂರು ಠಾಣೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದು, ಮೃತಪಟ್ಟವರ ವಿವರ ಹಾಗೂ ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.

ಈ ಅಪಘಾತದಲ್ಲಿ ರಾಮಚಂದ್ರ, ಮಹೇಶ, ರಾಮಣ್ಣ ಮೃತಪಟ್ಟಿದ್ದಾರೆ. ಭೀಮಾಬಾಯಿ, ಲಕ್ಷ್ಮೀಬಾಯಿ ಅನುಶ್ರೀ ಗಾಯಗೊಂಡಿದ್ದಾರೆ. ಇವರೆಲ್ಲರೂ ಕಲಬುರಗಿ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ.

ಹೆದ್ದಾರಿಯಿಂದ ಸರ್ವೀಸ್ ರಸ್ತೆಗೆ ವಾಹನ ಉರುಳಿದ್ದು, ಚಾಲಕನ ಸ್ಥಿತಿ ಗಂಭೀರವಾಗಿದೆ. ಅವರನ್ನು ಬೆಳಗಾವಿ ಆಸ್ಪತ್ರೆಗೆ ಸಾಗಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST