LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ. ಹರಿಪ್ರಸಾದ್ ಸ್ವೀಕಾರ 

Advertisement

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿರ್ಗಮಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬಿ.ಕೆ.ಹರಿಪ್ರಸಾದ್ ಅವರಿಗೆ ಪಕ್ಷದ ಸಾರಥ್ಯ ಹಸ್ತಾಂತರ ಮಾಡಲಿದ್ದಾರೆ.

ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಹರಿಪ್ರಸಾದ್ ಪದಗ್ರಹಣ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಸಿಎಂ ಸಿದ್ಧರಾಮಯ್ಯ ರಾಜ್ಯ ಸರ್ಕಾರದ ಸಚಿವರು, ಸಂಸದರು, ಶಾಸಕರು ಹಾಗೂ ಎಐಸಿಸಿ ವೀಕ್ಷಕರು ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚಿನ ಮುಖಂಡರು, ಕಾರ್ಯಕರ್ತರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನಲ್ಲಿರುವ ‘ತ್ರಿಪುರವಾಸಿನಿ’ ಮೈದಾನದಲ್ಲಿ ಬೃಹತ್ ಪದಗ್ರಹಣ ಸಮಾರಂಭದಲ್ಲಿ ಹರಿಪ್ರಸಾದ್ ಅವರು ಅಧಿಕೃತವಾಗಿ ಪಕ್ಷದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST