LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಹರಿದ ಟ್ರಕ್ : 9 ಜನ ದಾರುಣ ಸಾವು

Advertisement
ಹಾಸನ: ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯ ಮೇಲೆ ಟ್ರಕ್ ಹರಿದು ಭೀಕರ ದುರಂತ ಸಂಭವಿಸಿದೆ.

ಅಪಘಾತದಲ್ಲಿ 9 ಜನ ಸಾವನ್ನಪ್ಪಿದ್ದಾರೆ. ಟ್ರಕ್ ಹರಿದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿದ್ದ 5 ಜನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇನ್ನೂ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಗಣೇಶ ಮೆರವಣಿಗೆ ಸಾಗುತ್ತಿದ್ದ ವೇಳೆಯಲ್ಲಿ ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ದಾಟಿಕೊಂಡು ಟ್ರಕ್ ನುಗ್ಗಿದೆ. ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಟ್ರಕ್ ಹರಿದಿದ್ದು, ಟ್ರಕ್ ನಡಿ ಸಿಲುಕಿದ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ 5 ಜನ ಮೃತಪಟ್ಟಿದ್ದಾರೆ.

ಸರ್ಕಾರದಿಂದ ಪರಿಹಾರ ಘೋಷಣೆ

ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.

ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ ಎಂದು ಸಿಎಂ ತಿಳಿಸಿದ್ದಾರೆ.

 

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST