LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪತ್ರಕರ್ತರ ಏಕಮತ ತೀರ್ಮಾನ : ಅಲ್ಲಾವುದ್ದೀನ್ ಶೇಖ್ ಅಧ್ಯಕ್ಷರಾಗಿ ಆಯ್ಕೆ

Advertisement
ಅಥಣಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಥಣಿ ತಾಲೂಕು ಘಟಕದಲ್ಲಿ ಏಕಮತದ ನಿರ್ಧಾರ ಕೈಗೊಳ್ಳಲಾಗಿದ್ದು, ಅಲ್ಲಾವುದ್ದೀನ್ ಶೇಖ್ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಶನಿವಾರ ಮಧ್ಯಾಹ್ನ ಅಥಣಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಂಘಟನೆಯ ನೂತನ ಕಚೇರಿಯನ್ನು ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ್ ಬಂಗ್ಲೆ ಹಾಗೂ ಯೂಟ್ಯೂಬ್ ಸ್ಟಾರ್ ಬಸವರಾಜ್ ಸನದಿ ಉದ್ಘಾಟಿಸಿದರು.

ನಂತರ ನಡೆದ ಸಭೆಯಲ್ಲಿ ಮಲ್ಲಿಕಾರ್ಜುನ್ ಬಂಗ್ಲೆ ಅವರ ಸಮ್ಮುಖದಲ್ಲಿ ಅಲ್ಲಾವುದ್ದೀನ್ ಶೇಖ್ ಅವರನ್ನು ಅಧಿಕೃತವಾಗಿ ಅಧ್ಯಕ್ಷರಾಗಿ ಘೋಷಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಂಗ್ಲೆ, “ಜೀವನವು ಸಮಾಜ ಸೇವೆಗೆ ಮೀಸಲಾಗಿರಬೇಕು. ಭಯವಿಲ್ಲದೆ, ನಿಷ್ಠೆಯಿಂದ ಕೆಲಸ ಮಾಡುತ್ತಾ, ನಮ್ಮ ಕರ್ತವ್ಯದಿಂದ ಇತರರಿಗೆ ಉಪಯೋಗವಾಗುವಂತೆ ನಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಸಂಚಾಲಕರಾದ ಚಂದ್ರು ಸರ್, ಯೂಟ್ಯೂಬ್ ಸ್ಟಾರ್ ಬಸವರಾಜ ಸನದಿ, ಅಥಣಿ ಘಟಕದ ಉಪಾಧ್ಯಕ್ಷ ಅಜಯ ಕಾಂಬಳೆ, ಗೌರವಾಧ್ಯಕ್ಷ ರಶೀದ್ ಶೇಖ್, ಕಾರ್ಯದರ್ಶಿ ವಿಠ್ಠಲ ಖೋಕಾಟೆ, ಖಜಾಂಚಿ ಶಶಿಕಾಂತ್ ಪುಂಡಿಪಲ್ಲೆ, ಸದಸ್ಯರಾದ ಉಮರ್ ಮೂಮಿನ, ಲಕ್ಷ್ಮಣ ಮೂಕಿ, ಶಿವು ,ಸಂತೋಷ್ ಕಿರಣ , ಹನುಮಂತ ಕುರುಬರ ಸೇರಿದಂತೆ ಸಂಘಟನೆಯ ಹಲವು ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ವರದಿ :ಅಜಯ ಕಾಂಬಳೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ