LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಇನ್ನಿಲ್ಲ 

Advertisement

ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಕಿರುತೆರೆಗೆ ಮತ್ತೊಂದು ಆಘಾತ ಎದುರಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ಹಾಗೂ ಜನಪ್ರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದಾಗಿ ಗುರುವಾರ ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿಯಾಗಿರುವ ಶೈಲಜಾ ಅವರು, ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಕಲಾಭಿಮಾನಿಗಳನ್ನು ಅಗಲಿದ್ದಾರೆ.

ಉಪೇಂದ್ರ ಸಿನಿಮಾಗಳ ಮೂಲಕ ಜನಪ್ರಿಯತೆ:

ನಟಿ ಶೈಲಜಾ ಶ್ರೀಶೈಲನ್ ಅವರು ಕನ್ನಡ ಚಿತ್ರರಂಗದಲ್ಲಿ ನೂರಾರು ಸಿನಿಮಾಗಳಲ್ಲಿ ಅಭಿನಯಿಸಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದರು.

ವಿಶೇಷವಾಗಿ ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ನಿರ್ದೇಶನ ಹಾಗೂ ನಟನೆಯ ಸಿನಿಮಾಗಳಲ್ಲಿ ತಾಯಿ ಪಾತ್ರ ಸೇರಿದಂತೆ ಹಲವು ಪ್ರಮುಖ ಪಾತ್ರಗಳ ಮೂಲಕ ಅವರು ಇಡೀ ಕರ್ನಾಟಕಕ್ಕೆ ಪರಿಚಿತರಾಗಿದ್ದರು.

ಉಪೇಂದ್ರ ಅವರ ಸಾರ್ವಕಾಲಿಕ ಸೂಪರ್ ಹಿಟ್ ಚಿತ್ರಗಳಾದ ಎ ಮತ್ತು ಉಪ್ಪಿ 2 ಚಿತ್ರಗಳಲ್ಲದೆ, 'ಅನಂತನ ಅವಾಂತರ', ಬಾರೆ ನನ್ನ ಮುದ್ದಿನ ರಾಣಿ, ಪುಟ್ಟ ಹೆಂಡ್ತಿ ಹಾಗೂ ಗೃಹಪ್ರವೇಶ ಸೇರಿದಂತೆ ಹತ್ತಾರು ಯಶಸ್ವಿ ಚಿತ್ರಗಳಲ್ಲಿ ಇವರ ನೈಜ ಅಭಿನಯ ಪ್ರೇಕ್ಷಕರ ಮನ ಗೆದ್ದಿತ್ತು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ