LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ತಮಿಳುನಾಡಿಗೆ ನೀರು ನಿಲ್ಲಿಸದಿದ್ದರೆ ಉಗ್ರ ಪ್ರತಿಭಟನೆ : ಕೃಷ್ಣಮೂರ್ತಿ ಎಚ್ಚರಿಕೆ

Advertisement

ತುರುವೇಕೆರೆ: ರಾಜ್ಯದ ರೈತರಿಗೆ ಅನ್ಯಾಯ ಮಾಡಿ ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾಂಗ್ರೆಸ್ ಸರ್ಕಾರ ಕೂಡಲೇ ನೀರು ನಿಲ್ಲಿಸದಿದ್ದರೆ ಸಹಸ್ರಾರು ರೈತರೊಡಗೂಡಿ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕರುನಾಡ ವಿಜಯಸೇನೆ ತಾಲ್ಲೂಕು ಅಧ್ಯಕ್ಷ ಕೃಷ್ಣಮೂರ್ತಿ ಎಚ್ಚರಿಸಿದರು.

ಪಟ್ಟಣದ ತಾಲೂಕು ಕಛೇರಿಯಲ್ಲಿ ಉಪತಹಸೀಲ್ದಾರ್ ಸುನಿಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಮಳೆಯಿಲ್ಲದೆ ರಾಜ್ಯವೆಲ್ಲಾ ಬರಪೀಡಿತವಾಗಿದೆ. ತುರುವೇಕೆರೆ ತಾಲ್ಲೂಕಿನಲ್ಲೂ ಮಳೆ ಇಲ್ಲದೆ ಕೆರೆಕಟ್ಟೆಗಳೆಲ್ಲಾ ಬತ್ತಿದೆ. ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ತುರುವೇಕೆರೆ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ರಾಜ್ಯದ ಹಿತಾಸಕ್ತಿ ಬಲಿಕೊಟ್ಟು ತಮಿಳುನಾಡಿಗೆ ನೀರು ಹರಿಸುತ್ತಿರುವುದು ರೈತರಿಗೆ ಮಾಡಿದ ದ್ರೋಹ ಎಂದು ಕಿಡಿಕಾರಿದರು.

ಹಾಸನದ ಗೊರೂರು ಡ್ಯಾಂನಿಂದ ಬರುವ ಹೇಮಾವತಿ ನದಿ‌ ನೀರೇ ತಿಪಟೂರು, ತುರುವೇಕೆರೆ, ಗುಬ್ಬಿ ಹಾಗೂ ಜಿಲ್ಲೆಯ ರೈತರ ಜೀವನಾಡಿಯಾಗಿದೆ. ಹೇಮಾವತಿ ನೀರನ್ನು ಜಿಲ್ಲೆಯ ಕೆರೆಕಟ್ಟೆಗೆ ತುಂಬಿಸುವುದನ್ನು ಬಿಟ್ಟು ಹೇಮಾವತಿ ಜಲಾಶಯದ ನೀರನ್ನು ಕಾವೇರಿ ಜಲಾಶಯಕ್ಕೆ ಬಿಟ್ಟುಕೊಂಡು ತಮಿಳುನಾಡಿಗೆ ಹರಿಸುತ್ತಿರುವುದು ನಾಡಿನ ಜನತೆಗೆ, ರೈತರಿಗೆ ಮಾಡಿರುವ ಅನ್ಯಾಯ ಎಂದರು.

ಕೂಡಲೇ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು. ತುರುವೇಕೆರೆ ತಾಲ್ಲೂಕಿನ ಬರಪೀಡಿತ ಎಂದು ಘೋಷಿಸಬೇಕು. ಇಲ್ಲವಾದರೆ ತಾಲೂಕಿನ ಸಂಘ ಸಂಸ್ಥೆಗಳು, ರೈತರೊಡಗೂಡಿ ಪ್ರತಿಭಟನೆ‌ ನಡೆಸಲಾಗುವುದೆಂದರು.

ಈ ಸಂದರ್ಭದಲ್ಲಿ ರೈತ ಸಂಘದ ಶ್ರೀನಿವಾಸಗೌಡ, ಬೀದಿಬದಿ ವ್ಯಾಪಾರಿಗಳ ಸಂಘದ‌ ಮಾರುತಿ, ಸಿಐಟಿಯು ಸತೀಶ್, ಕರುನಾಡ ವಿಜಯಸೇನೆ  ಸಂಘಟನೆಯ ಪದಾಧಿಕಾರಿಗಳು, ನಾಗರೀಕರು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ  ಭಟ್

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ