LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ಹೋರಾಟ ತೀವ್ರಗೊಳಿಸುತ್ತೇವೆ : ಬಿ. ವೈ ವಿಜಯೇಂದ್ರ

Advertisement

ಬಳ್ಳಾರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಬಡವರ ವಿರೋಧಿ ಹಾಗೂ ರೈತ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. 

ಬುಧವಾರ ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರೈತರ ಹಿತಕ್ಕಿಂತ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ನೀರಾವರಿ ಸಚಿವರಾಗಿದ್ದಾಗ ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್‌ಗಳ ದುರಸ್ತಿಗೆ 24 ತಿಂಗಳು ತೆಗೆದುಕೊಂಡ ಪರಿಣಾಮ, ರೈತರು ಎರಡನೇ ಬೆಳೆ ಬೆಳೆಯಲು ಸಾಧ್ಯವಾಗದೆ ಭಾರೀ ನಷ್ಟ ಅನುಭವಿಸಿದರು. 

ಆದರೆ ಮುಖ್ಯಮಂತ್ರಿಯಾದ 24 ಗಂಟೆಯೊಳಗೆ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ಆದೇಶ ಹೊರಡಿಸಿದ್ದಾರೆ ಎಂದು ಆರೋಪಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆಯಿಂದ ಫಲವತ್ತಾದ ಕೃಷಿಭೂಮಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. 

'ರೈತ ವಿರೋಧಿ' ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರ್ಕಾರದ ನೀತಿಯಿಂದಲೇ ರೈತರು ಹಾಗೂ ಮಹಿಳೆಯರು ಪೊರಕೆ ಹಿಡಿದು ಪ್ರತಿಭಟನೆ ನಡೆಸುವ ಪರಿಸ್ಥಿತಿ ಬಂದಿದೆ ಎಂದು ವಿಜಯೇಂದ್ರ ಹೇಳಿದರು.

ಸರ್ಕಾರವು ರೈತರ ಜೀವನದೊಂದಿಗೆ ಚೆಲ್ಲಾಟವಾಡಬಾರದು ಎಂದು ಎಚ್ಚರಿಸಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಪ್ರತಿಭಟನೆ ನಡೆಸಿದ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ರೈತರ ಮೇಲಿನ ದೌರ್ಜನ್ಯವನ್ನು ಕೂಡಲೇ ನಿಲ್ಲಿಸಬೇಕೆಂದೂ ಒತ್ತಾಯಿಸಿದರು.

ಜುಲೈ 17ರಂದು ಬೆಂಗಳೂರಿನಲ್ಲಿ ಬಿಜೆಪಿ ಧರಣಿ

ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಹಾಗೂ ಬಿಡದಿ ಟೌನ್‌ಶಿಪ್ ಯೋಜನೆಯನ್ನು ಸಂಪೂರ್ಣ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜುಲೈ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಶಾಸಕರು, ಸಂಸದರು, ಮಾಜಿ ಶಾಸಕರು ಹಾಗೂ ಮಾಜಿ ಸಂಸದರು ದಿನಪೂರ್ತಿ ಧರಣಿ ನಡೆಸಲಿದ್ದಾರೆ ಎಂದು ವಿಜಯೇಂದ್ರ ಘೋಷಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ